×
Ad

Bidar | ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಿ: ಎಚ್. ಶಶಿಧರ್ ಶೆಟ್ಟಿ

ಶಾಹೀನ್ ಕಾಲೇಜಿನಲ್ಲಿ ಕಾನೂನು ಜಾಗೃತಿ ಕಾರ್ಯಕ್ರಮ

Update: 2026-07-04 17:53 IST

ಬೀದರ್ : ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಚ್.ಶಶಿಧರ್ ಶೆಟ್ಟಿ ಕರೆ ನೀಡಿದರು.

ನಗರದ ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ನಶೆ ಮುಕ್ತ ಭಾರತ ಹಾಗೂ ಪೋಕ್ಸೋ ಕಾಯ್ದೆ ಕುರಿತು ಕಾನೂನು ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಯುವಕರಲ್ಲಿ ಕಾನೂನು ಅರಿವು ಮೂಡಿಸುವುದು ಮತ್ತು ಪೋಕ್ಸೋ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಮೂಲಕ ಮಕ್ಕಳ ಸುರಕ್ಷತೆಯನ್ನು ಖಾತರಿಪಡಿಸುವ ಅಗತ್ಯವಿದೆ ಎಂದು ಅವರು ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಘವೇಂದ್ರ ಉಪಾಧ್ಯ ಮಾತನಾಡಿ, ಪ್ರಾಧಿಕಾರವು ನಾಗರಿಕರಲ್ಲಿ ಹಕ್ಕು ಹಾಗೂ ಕರ್ತವ್ಯಗಳ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ ಅಗತ್ಯವಿರುವವರಿಗೆ ಉಚಿತ ಕಾನೂನು ನೆರವು ಒದಗಿಸುತ್ತಿದೆ ಎಂದು ತಿಳಿಸಿದರು.

ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ. ಅಬ್ದುಲ್ ಖದೀರ್ ಮಾತನಾಡಿ, ವಿದ್ಯಾರ್ಥಿಗಳು ಮಾದಕ ದ್ರವ್ಯಗಳಿಂದ ದೂರವಿದ್ದು, ಸುರಕ್ಷಿತ ಹಾಗೂ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ತಮ್ಮ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಕಾನೂನು ವೃತ್ತಿಪರರು, ಅಧಿಕಾರಿಗಳು, ಶಾಹೀನ್ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಪಾಲ್ಗೊಂಡಿದ್ದರು. ಪ್ರಾಚಾರ್ಯ ಖಾಜಾ ಪಟೇಲ್ ಸ್ವಾಗತಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News