ಬೀದರ್ | ಜು.10ರಿಂದ ಸರಕಾರದ ಸಾಧನೆ ಬಿಂಬಿಸುವ ವಸ್ತು ಪ್ರದರ್ಶನ
Update: 2025-07-08 20:02 IST
ಬೀದರ್ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಜು.10 ರಿಂದ 12 ರವರೆಗೆ ಜಿಲ್ಲಾ ಕೇಂದ್ರ ಬಸ್ ನಿಲ್ದಾಣದ ಆವರಣದಲ್ಲಿ ಸರಕಾರದ ಯೋಜನೆಗಳು ಹಾಗೂ ಸಾಧನೆ ಬಿಂಬಿಸುವ ವಸ್ತು ಪ್ರದರ್ಶನ ಹಮ್ಮಿಕೊಳ್ಳಲಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ವಸ್ತು ಪ್ರದರ್ಶನವು ಮೂರು ದಿನಗಳ ಕಾಲ ಬೆಳಿಗ್ಗೆ 9 ಗಂಟೆಯಿಂದ ರಾತ್ರಿ 8 ಗಂಟೆ ವರೆಗೆ ಇರಲಿದೆ. ಆದ್ದರಿಂದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಮಳಿಗೆಗೆ ಭೇಟಿ ನೀಡಬೇಕು ಎಂದು ಅವರು ಹೇಳಿದ್ದಾರೆ.