ಬೀದರ್ : ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ
Update: 2025-02-18 08:30 IST
ಬೀದರ್ : ಸಾಲಬಾಧೆ ತಾಳದೆ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಸವಕಲ್ಯಾಣ ತಾಲ್ಲೂಕಿನ ಬೇಟಬಾಲಕುಂದಾ ಗ್ರಾಮದಲ್ಲಿ ನಡೆದಿದೆ.
ಪಂಡರಿ ಕಳಮಾಸೆ (37) ಆತ್ಮಹತ್ಯೆ ಮಾಡಿಕೊಂಡ ರೈತ. ಮೃತ ರೈತನಿಗೆ ಪಿಕೆಪಿಎಸ್ ನಲ್ಲಿ 1 ಲಕ್ಷ ರೂ. ಸೇರಿ ಖಾಸಗಿ ಸಾಲವಿದ್ದು, ಸಾಲಬಾಧೆಯಿಂದ ಬೇಸತ್ತು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಈ ಘಟನೆ ಕುರಿತು ಹುಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.