×
Ad

ಬೀದರ್: ಗುಂಡಿನ ದಾಳಿ, ಹಣ ದರೋಡೆ ಪ್ರಕರಣ; ಸ್ಥಳ ಪರಿಶೀಲನೆ ನಡೆಸಿದ ಸಚಿವ ಈಶ್ವರ್ ಖಂಡ್ರೆ

Update: 2025-01-17 14:06 IST

ಬೀದರ್ : ನಿನ್ನೆ ನಡೆದ ಎಟಿಎಂ ಸಿಬ್ಬಂದಿ ಮೇಲೆ ಗುಂಡಿನ ದಾಳಿ ಹಾಗೂ ಹಣ ದರೋಡೆ ನಡೆದ ಸ್ಥಳಕ್ಕೆ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಗರದಲ್ಲಿ ನಡೆದ ಎಸ್ ಬಿ ಐ ಬ್ಯಾಂಕ್ ದರೋಡೆ ಘಟನೆಯ ಸ್ಥಳಕ್ಕೆ ಭೇಟಿ ನೀಡಿ ಅವರು ಪರಿಶೀಲನೆ ನಡೆಸಿದರು. ಆರೋಪಿಗಳನ್ನು ಶೀಘ್ರ ಪತ್ತೆ ಹಚ್ಚಿ ಕಠಿಣ ಶಿಕ್ಷೆಗೆ ಒಳಪಡಿಸುವ ಭರವಸೆ ನೀಡಿದರು.

ಘಟನೆ ಕುರಿತು ಮಾಹಿತಿ ಪಡೆದು, ಘಟನೆಗೆ ಸಂಬಂಧಿಸಿದಂತೆ ತನಿಖೆಯನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬ್ಯಾಂಕ್ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಭದ್ರತೆ ಹೆಚ್ಚಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಪೊಲೀಸ್ ಇಲಾಖೆ ಮತ್ತು ಸಂಬಂಧಿತ ಪ್ರಾಧಿಕಾರಗಳಿಗೆ ಸೂಚಿಸಿದರು.

 ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿ ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ), ಐಜಿಪಿ, ಎಸ್ಪಿ ಮತ್ತು ಇತರ ಹಿರಿಯ ಅಧಿಕಾರಿಗಳು ಹಾಜರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News