Bidar | ಮೇ 30ರಂದು ವಸತಿ ಕಾಲೇಜುಗಳ ಪ್ರಥಮ ಪಿಯುಸಿ ಪ್ರವೇಶಾತಿ ಕೌನ್ಸೆಲಿಂಗ್
Update: 2026-05-22 18:38 IST
ಸಾಂದರ್ಭಿಕ ಚಿತ್ರ
ಬೀದರ್ : ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ನಡೆಸಲಾಗುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಕಾಲೇಜು ಹಾಗೂ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಕಾಲೇಜುಗಳ 2026-27ನೇ ಸಾಲಿನ ಪ್ರಥಮ ಪಿಯುಸಿ ಪ್ರವೇಶಾತಿಗಾಗಿ ಮೇ 30ರಂದು ಬೆಳಿಗ್ಗೆ 9 ಗಂಟೆಗೆ ಮೌಲಾನಾ ಆಝಾದ್ ಭವನದಲ್ಲಿ ಕೌನ್ಸೆಲಿಂಗ್ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಮೆರಿಟ್ ಆಧಾರದ ಮೇಲೆ ಕೌನ್ಸೆಲಿಂಗ್ ಪ್ರಕ್ರಿಯೆ ನಡೆಸಲಾಗುತ್ತಿದ್ದು, ಅರ್ಹ ವಿದ್ಯಾರ್ಥಿಗಳಿಗೆ ಪ್ರವೇಶಾತಿ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ. ಅಲ್ಲದೆ 97394 38240 ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.