ಬೀದರ್‌ : ಹೊಲದಲ್ಲಿ ಬೆಳೆದ 4 ಲಕ್ಷ ರೂ. ಕ್ಕೂ ಅಧಿಕ ಮೌಲ್ಯದ ಗಾಂಜಾ ಗಿಡ ವಶಕ್ಕೆ ಪಡೆದು, ಆರೋಪಿಯನ್ನು ಬಂಧಿಸಿದ ಘಟನೆ ಬಸವಕಲ್ಯಾಣ ತಾಲೂಕಿನ ಮುಡಬಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಬಸವಕಲ್ಯಾಣ ತಾಲೂಕಿನ ಮುಡಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಮುಡಬಿ ಗ್ರಾಮದ ಹೊರವಲಯದ ಹೊಲದಲ್ಲಿ ಗಾಂಜಾ ಗಿಡಗಳನ್ನು ಬೆಳೆದ ಬಗ್ಗೆ ಮಾಹಿತಿ ಮೇರೆಗೆ, ಎಸ್ಪಿ ಪ್ರದೀಪ್ ಗುಂಟಿ ಅವರ ನಿರ್ದೇಶನದಂತೆ ದಾಳಿ ನಡೆದಿದೆ. ಈ ವೇಳೆ 8 ಕೆ.ಜಿ 820 ಗ್ರಾಂ ತೂಕದ 4 ಲಕ್ಷ 41 ಸಾವಿರ ರೂ. ಬೆಲೆ ಬಾಳುವ 183 ಹಸಿ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.  

"ಮಾದಕ ವಸ್ತು ಬೆಳೆಸುವುದು, ಸೇವಿಸುವುದು ಮತ್ತು ಸರಬರಾಜು ಮಾಡುವುದು ಅಪರಾಧವಾಗಿದ್ದು, ಇಂತಹ ಚಟುವಟಿಕೆಯಲ್ಲಿ ಭಾಗಿಯಾದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ಆದ್ದರಿಂದ ಸಾರ್ವಜನಿಕರು ಕಾನೂನು ವಿರೋಧಿ ಚಟುವಟಿಕೆಗಳಲ್ಲಿ ಭಾಗವಹಿಸಿ ಕಾನೂನು ಸಂಘರ್ಷಕ್ಕೆ ಒಳಗಾಗಿ ತನ್ನ ಮತ್ತು ತನ್ನ ಕುಟುಂಬದ ಭವಿಷ್ಯವನ್ನು ಹಾಳು ಮಾಡಿಕೊಳ್ಳಬೇಡಿ. ಬೀದರ್‌ ಜಿಲ್ಲೆಯನ್ನು ನಶಾ ಮುಕ್ತ ಜಿಲ್ಲೆಯನ್ನಾಗಿಸಲು ಜಿಲ್ಲೆಯ ಪೊಲೀಸರ ಕಾರ್ಯಾಚರಣೆಯು ಸದಾ ಮುಂದುವರೆಯುತ್ತದೆ" ಎಂದು ಎಸ್ಪಿ ಪ್ರದೀಪ್ ಗುಂಟಿ ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor