×
Ad

ಬೀದರ್ | ಜು.19ರಂದು ಜೆಸ್ಕಾಂ ಗ್ರಾಹಕರ ಕುಂದುಕೊರತೆ ನಿವಾರಣಾ ಸಭೆ

Update: 2025-07-17 18:15 IST

ಬೀದರ್ : ಜು.19 ರಂದು ಜೆಸ್ಕಾಂನ ಗ್ರಾಹಕರ ಕುಂದು ಕೊರತೆ ನಿವಾರಣಾ ಸಭೆ ಏರ್ಪಡಿಸಲಾಗಿದೆ ಎಂದು ಹುಮನಾಬಾದ್ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹುಮನಾಬಾದ್ ಕಾರ್ಯ ಮತ್ತು ಪಾಲನೆ ವಿಭಾಗದ ವ್ಯಾಪ್ತಿಯಲ್ಲಿ ಬರುವ ಹುಮನಾಬಾದ್, ಮನ್ನಾಏಖೇಳ್ಳಿ ಹಾಗೂ ಬಸವಕಲ್ಯಾಣ ಉಪ ವಿಭಾಗಗಳಲ್ಲಿ ಸಭೆ ಹಮ್ಮಿಕೊಳ್ಳಲಾಗಿದ್ದು, ಅಂದು ಬೆಳಿಗ್ಗೆ 11 ರಿಂದ 1 ಗಂಟೆವರೆಗೆ ಹುಮನಾಬಾದ್ ಉಪ ವಿಭಾಗದ ಘಾಟಬೋರಾಳ್ ಶಾಖೆ ಕಚೇರಿ, ಮನ್ನಾಏಖೇಳ್ಳಿ ಉಪ ವಿಭಾಗದ ಮನ್ನಾಏಖೇಳ್ಳಿ ಶಾಖೆ ಕಚೇರಿ ಹಾಗೂ ಬಸವಕಲ್ಯಾಣ ಉಪ ವಿಭಾಗದ ಮುಚಳಂಬ ಶಾಖೆ ಕಚೇರಿಯಲ್ಲಿ ಸಭೆಗಳು ನಡೆಯಲಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಸಭೆಯಲ್ಲಿ ಸಾರ್ವಜನಿಕರು ಹಾಗೂ ಗು.ವಿ.ಸ.ಕಂ.ನಿ, ಗ್ರಾಹಕರು ಉಪಸ್ಥಿತರಿದ್ದು, ಕುಂದು ಕೊರತೆಯ ಅರ್ಜಿಗಳು ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News