×
Ad

ಬೀದರ್ | ಸಮರ್ಥ ಶಿಕ್ಷಕರಿಂದಲೇ ಉತ್ತಮ ಸಮಾಜ ನಿರ್ಮಿಸಲು ಸಾಧ್ಯ : ಡಾ.ರಜಿನೀಶ್ ವಾಲಿ

Update: 2025-02-12 20:36 IST

ಬೀದರ್ : ಸಮರ್ಥ ಶಿಕ್ಷಕರಿಂದಲೇ ಉತ್ತಮ ಸಮಾಜ ನಿರ್ಮಿಸಲು ಸಾಧ್ಯ ಎಂದು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ಡಾ.ರಜಿನೀಶ್ ವಾಲಿ ಅಭಿಪ್ರಾಯಪಟ್ಟರು.

ಮಂಗಳವಾರ ಹೈಕಶಿ ಸಂಸ್ಥೆಯ ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯದ ಬಿಎಡ್ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಒಬ್ಬ ಸಮರ್ಥ ಶಿಕ್ಷಕ ಮಾತ್ರ ಒಂದು ಉತ್ತಮ ಸಮಾಜವನ್ನು ನಿರ್ಮಾಣ ಮಾಡುವುದರ ಮೂಲಕ ದೇಶದ ಅಭಿವೃದ್ಧಿಯಲ್ಲಿ ಮಹತ್ತರವಾದ ಪಾತ್ರವನ್ನು ವಹಿಸುತ್ತಾರೆ. ಜ್ಞಾನದ ಜೊತೆಗೆ ಕೌಶಲ್ಯ ಬೆಳೆಸಿಕೊಳ್ಳಬೇಕು. ಆವಾಗ ಮಾತ್ರ ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಸಾಧಿಸಲು ಸಾಧ್ಯವಾಗುತ್ತದೆ. ಶಿಕ್ಷಣವು ವಿದ್ಯಾರ್ಥಿಗಳಿಗೆ ಅಕ್ಷರ ಜ್ಞಾನದ ಜೊತೆಗೆ ಸಾಮಾಜಿಕ ಅರಿವು ಕೂಡ ಬೆಳೆಸಿಕೊಡುವಂತದ್ದಾಗಿದೆ ಎಂದು ಹೇಳಿ ವಿದ್ಯಾರ್ಥಿಗಳ ಭವಿಷ್ಯದ ಜೀವನ ಉಜ್ವಲವಾಗಲಿ ಎಂದು ಶುಭ ಹಾರೈಸಿದರು.

ಬೀದರ್ ವಿಶ್ವವಿದ್ಯಾಲಯದ ಆಡಳಿತ ಕುಲ ಸಚಿವೆ ಸುರೇಖಾ ಅವರು ಮಾತನಾಡಿ, ಸತತ ಪರಿಶ್ರಮ, ನಿರಂತರ ಅಧ್ಯಯನದಿಂದ ವ್ಯಕ್ತಿ ಯಶಸ್ಸು ಹೊಂದಲು ಸಾಧ್ಯವಾಗುತ್ತದೆ. ಇಂದಿನ ಆಧುನಿಕ ಯುಗದಲ್ಲಿ ಪ್ರಯತ್ನಶೀಲರಾಗಿ ತಮ್ಮ ಗುರಿಯನ್ನು ತಲುಪಬೇಕು. ಶಿಸ್ತು, ಸಮಯ ಪ್ರಜ್ಞೆ, ಗುರು ಹಿರಿಯರಲ್ಲಿ ಗೌರವ ಮನೋಭಾವದಿಂದ ಇದ್ದಾಗ ಮಾತ್ರ ಅವರು ತಮ್ಮ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಹಾಗೆಯೇ ಗುರುಗಳ ಸೂಕ್ತ ಮಾರ್ಗದರ್ಶನ ಪಡೆದಾಗ ಪ್ರತಿಫಲ ದೊರೆಯುತ್ತದೆ. ಶಿಕ್ಷಕ ವೃತ್ತಿಯು ಎಲ್ಲಾ ವೃತ್ತಿಗಳಲ್ಲಿಯೇ ಶ್ರೇಷ್ಠವಾದದ್ದು. ಇದನ್ನು ಅತ್ಯಂತ ಪ್ರಾಮಾಣಿಕ ಹಾಗೂ ನಿಷ್ಠೆಯಿಂದ ನಿಭಾಯಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಂಭುಲಿಂಗ್ ವಾಲ್ದೊಡ್ಡಿ, ಬಿವಿಬಿ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಪಿ. ವಿಠ್ಠಲರೆಡ್ಡಿ, ಪ್ರಾಚಾರ್ಯ ಡಾ. ಮಲ್ಲಿಕಾರ್ಜುನ್ ಕನಕಟ್ಟೆ, ಉಪನ್ಯಾಸಕರಾದ ಡಾ. ಸಂತೋಷಕುಮಾರ್ ಸಜ್ಜನ್, ವೀಣಾ ಜಲಾದೆ, ಶಿಲ್ಪಾ ಹಿಪ್ಪರಗಿ, ರಾಜಕುಮಾರ್ ಸಿಂಧೆ, ಪಾಂಡುರಂಗ್ ಕುಂಬಾರ್, ಡಾ. ಸಿದ್ದರಾಮ್ ನೆಂಗಾ, ನೂರಪಾಶಾ, ಪ್ರಶಿಕ್ಷಣಾರ್ಥಿಗಳಾದ ಶ್ರೀನಿವಾಸ್, ಕೆ.ಎಲ್. ಶಿವಶರಣಪ್ಪ ಹಾಗೂ ಭಾಗಿರತಿ ಕೊಂಡಾ ಸೇರಿದಂತೆ ಕಾಲೇಜಿನ ಸಿಬ್ಬಂದಿ ಭಾಗವಹಿಸಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News