ಬೀದರ್ | ರಸ್ತೆ ದುರಸ್ಥಿ ಮಾಡದ ಲೋಕೋಪಯೋಗಿ ಇಲಾಖೆ ಅಧಿಕಾರಿಯನ್ನು ವರ್ಗಾವಣೆ ಮಾಡಲು ಗುರುದಾಸ್ ಮನವಿ
ಬೀದರ್ : ನಗರ ಹಾಗೂ ನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿವೆ. ಇದನ್ನು ನೋಡಿಯೂ ಕಣ್ಮುಚ್ಚಿ ಕುಳಿತಿರುವೆ ಲೋಕೋಪಯೋಗಿ ಇಲಾಖೆಯ ಅಧಿಕಾರಿ ಶಿವಕುಮಾರ್ ಕಾಮಶೆಟ್ಟಿ ಅವರನ್ನು ವರ್ಗಾವಣೆ ಮಾಡಬೇಕು ಎಂದು ಕರ್ನಾಟಕ ಯುವ ರಕ್ಷಣ ವೇದಿಕೆಯ ಯವ ಘಟಕದ ಜಿಲ್ಲಾಧ್ಯಕ್ಷ ಗುರುದಾಸ್ ಅಮದಲಪಾಡ್ ಅವರು ಮನವಿ ಮಾಡಿದ್ದಾರೆ.
ಇಂದು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ, ಬೀದರ್ ನಗರ ಸೇರಿದಂತೆ ತಾಲೂಕು ವ್ಯಾಪ್ತಿಯಲ್ಲಿ ಬರುವ ಮುಖ್ಯ ರಸ್ತೆಗಳು ಹಾಗೂ ಹೆದ್ದಾರಿಗಳು ಮಳೆಯಿಂದ ತುಂಬಾ ಹದಗೆಟ್ಟಿವೆ. ವಾಹನ ಸಂಚಾರಕ್ಕೆ ತುಂಬ ತೊಂದರೆಯಾಗುತ್ತಿದ್ದು, ಈ ರಸ್ತೆಗಳಲ್ಲಿ ಸಂಚಾರ ಮಾಡುವ ಸಾರ್ವಜನಿಕರು ತಮ್ಮ ಜೀವನದ ಹಂಗನ್ನು ತೊರೆದು ಸಂಚಾರ ಮಾಡುವಂತಾಗಿದೆ ಎಂದು ತಿಳಿಸಿದ್ದಾರೆ.
ರಸ್ತೆಗಳಲ್ಲಿ ಜನಸಾಮಾನ್ಯರಿಗೆ ಹಾಗೂ ವಿದ್ಯಾರ್ಥಿಗಳಿಗೆ ಓಡಾಡಲು ಆಗುತ್ತಿಲ್ಲ. ಶಿವನಗರ ರಸ್ತೆ ಸಂಪೂರ್ಣವಾಗಿ ಹಾಳಾಗಿದೆ. ಈ ಎಲ್ಲ ವಿಷಯದ ಕುರಿತು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಈ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಬೇಕು. ಆದರೆ ಅದೂ ಯಾವುದು ಮಾಡದೆ ಲೋಕಯೋಗಿಯ ಅಧಿಕಾರಿ ಶಿವಕುಮಾರ್ ಕಾಮಶೆಟ್ಟಿ ಅವರು ತಮ್ಮ ಕಚೇರಿಗೆ ಬಂದು ಹಾಜರಿ ಹಾಕಿ ಸಂಬಳ ಮಾತ್ರ ಪಡೆಯುವಲ್ಲಿ ಕಾರ್ಯನಿರತರಾಗಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಕಾರಣದಿಂದಾಗಿ ಸಾರ್ವಜನಿಕರ ಹಿತದೃಷ್ಟಿಯಿಂದ ಶಿವಕುಮಾರ್ ಕಾಮಶೆಟ್ಟಿ ಅವರನ್ನು ವರ್ಗಾವಣೆ ಮಾಡಿ, ಬೀದರ್ ಜಿಲ್ಲೆಗೆ ಕ್ರಿಯಾಶೀಲ ಅಧಿಕಾರಿಯುನ್ನು ಒದಗಿಸುವ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.