×
Ad

Bidar | ಜೂ.19 ರಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರಿಂದ ದೂರುಗಳ ವಿಚಾರಣೆ

Update: 2026-06-17 16:33 IST

ಬೀದರ್ : ಜಿಲ್ಲೆಯಲ್ಲಿ ಕರ್ನಾಟಕ ಉಪಲೋಕಾಯುಕ್ತ-2 ಹಾಗೂ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಜಿಲ್ಲೆಯಲ್ಲಿ ಎರಡು ದಿನ ಪ್ರವಾಸ ಕೈಗೊಳ್ಳಲಿದ್ದು, ಜೂ.19 ರಂದು ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 5 ಗಂಟೆವರೆಗೆ ನಗರದ ಚನ್ನಬಸವ ಪಟ್ಟದೇವರ ರಂಗಮಂದಿರದಲ್ಲಿ ದೂರುದಾರರಿಂದ ದಾಖಲಾಗಿರುವ ದೂರುಗಳ ವಿಚಾರಣೆ ನಡೆಸಲಿದ್ದಾರೆ ಎಂದು ಕಲಬುರಗಿ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಸಿ.ಸಿದ್ದರಾಜು ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಸಾರ್ವಜನಿಕರು ಈಗಾಗಲೇ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಿಸಿರುವ ದೂರುಗಳಿಗೆ ಸಂಬಂಧಿಸಿದಂತೆ ವಿಚಾರಣೆ ಹಿನ್ನೆಲೆ ದೂರುದಾರರಿಗೆ ಹಾಗೂ ಎದುರುದಾರ ಸರ್ಕಾರಿ ನೌಕರರಿಗೆ ನೊಟೀಸ್‌ಗಳನ್ನು ಜಾರಿ ಮಾಡಲಾಗಿದ್ದು, ಎಲ್ಲಾ ದೂರುದಾರರು ಜೂ.19 ರಂದು ತಾವು ನೀಡಿರುವ ದೂರಿಗೆ ಸಂಬಂಧಿಸಿದ ಎಲ್ಲಾ ಸೂಕ್ತ ದಾಖಲೆಗಳೊಂದಿಗೆ ಸಭೆಗೆ ಸಮಯಕ್ಕೆ ಸರಿಯಾಗಿ ಹಾಜರಾಗಿ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಅವರು ಸೂಚಿಸಿದ್ದಾರೆ.

ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ ದೂರುಗಳ ಕುರಿತು ವಿಚಾರಣೆ ಕೈಗೊಳ್ಳುವ ಸಭೆಯಾಗಿರುವುದರಿಂದ ಅಂದು ಸಾರ್ವಜನಿಕರಿಂದ ಯಾವುದೇ ರೀತಿಯ ದೂರುಗಳನ್ನು ಸ್ವೀಕರಿಸುವುದಿಲ್ಲ. ಸಾರ್ವಜನಿಕರು ದೂರು ದಾಖಲಿಸುವುದಿದ್ದಲ್ಲಿ, ನಗರದ ಕೆಎಚ್‌ಬಿ ಕಾಲೋನಿಯಲ್ಲಿನ ಬಾಲಭವನ ಎದುರುಗಡೆ ಇರುವ ಕರ್ನಾಟಕ ಲೋಕಾಯುಕ್ತ ಪೊಲೀಸ್ ಠಾಣೆ-585 401ಗೆ ಹಾಜರಾಗಿ ದೂರು ಸಲ್ಲಿಸುವಂತೆ ಅವರು ಮಾಹಿತಿ ನೀಡಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಎಸ್‌ಪಿ ಮೊ.93640 62519, ಡಿಎಸ್‌ಪಿ ಮೊ. 93640 62571, ಪಿಐ-1 ಮೊ.93640 62672, ಪಿಐ-2 ಮೊ.93640 62673, ಪಿಐ-3 ಮೊ.93640 62674, ಪಿಐ-4 ಮೊ.93640 62675ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News