×
Ad

ಬೀದರ್ | ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಸಹಾಯವಾಣಿ ಸ್ಥಾಪನೆ

Update: 2025-03-18 16:50 IST

ಸಾಂದರ್ಭಿಕ ಚಿತ್ರ

ಬೀದರ್ : ಕುಡಿಯುವ ನೀರಿನ ಸಮಸ್ಯೆಗಳಿದ್ದರೆ ದೂರು ನೀಡಲು ಸಹಾಯವಾಣಿ ಸ್ಥಾಪಿಸಲಾಗಿದೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೇಸಿಗೆಯಲ್ಲಿ ಜಿಲ್ಲೆಯ ಗ್ರಾಮೀಣ ಪ್ರದೇಶದ ಸಾರ್ವಜನಿಕರಿಗೆ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಸಮಸ್ಯೆಗಳಿಗೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಸಹಾಯವಾಣಿ ಸ್ಥಾಪಿಸಲಾಗಿದೆ. ಕುಡಿಯುವ ನೀರಿನ ಬಗ್ಗೆ ಸಮಸ್ಯೆಗಳಿದ್ದರೆ ಸಾರ್ವಜನಿಕರು ಈ ಸಹಾಯವಾಣಿ ಸಂಖ್ಯೆಗಳಿಗೆ ಕರೆ ಮಾಡಬೇಕು ಎಂದು ಅವರು ತಿಳಿಸಿದ್ದಾರೆ.

ಸಹಾಯವಾಣಿ ಸಂಖ್ಯೆಗಳ ವಿವರ :

ಜಿಲ್ಲಾ ಮಟ್ಟದ ಸಹಾಯವಾಣಿ (9480587444), ಔರಾದ್ (ಬಿ) (9448196200), ಕಮಲನಗರ್ (9448196207), ಬಸವಕಲ್ಯಾಣ (9448196201), ಹುಲಸೂರು (9448195205), ಹುಮನಾಬಾದ್ (9448196206), ಚಿಟಗುಪ್ಪಾ (9448196204), ಬೀದರ್ (9448196203), ಭಾಲ್ಕಿ (9448196202).

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News