×
Ad

ಬೀದರ್ | ತ್ವರಿತ ಜಾತಿ, ಆದಾಯ ಪ್ರಮಾಣ ಪತ್ರಕ್ಕೆ ಸಹಾಯವಾಣಿ ಸ್ಥಾಪನೆ : ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

Update: 2025-02-14 23:51 IST

ಬೀದರ್ : ಜಿಲ್ಲೆಯಲ್ಲಿ ಗ್ರಾಮ ಅಡಳಿತ ಅಧಿಕಾರಿಗಳ ಮುಷ್ಕರದಿಂದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯಲು ವಿಳಂಬವಾಗುತ್ತಿದ್ದು, ವಿದ್ಯಾರ್ಥಿಗಳ ಹಾಗೂ ಅಭ್ಯರ್ಥಿಗಳ ಅನುಕೂಲಕ್ಕಾಗಿ ಜಿಲ್ಲಾಧಿಕಾರಿ ಕಾರ್ಯಾಲಯದಲ್ಲಿ ಸಹಾಯವಾಣಿ ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪರೀಕ್ಷೆ ಹಾಗೂ ನೇಮಕಾತಿ ಉದ್ದೇಶಗಳಿಗಾಗಿ ತ್ವರಿತವಾಗಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಅವಶ್ಯಕತೆಯಿರುವ ವಿದ್ಯಾರ್ಥಿ, ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 08482-224319 ಈ ನಂಬರ್ ಗೆ ಸಂಪರ್ಕಿಸಬಹುದಾಗಿದೆ.

ಜಾತಿ ಮತ್ತು ಆದಾಯ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ಸ್ವೀಕೃತ ಕರೆಗಳಿಗೆ ಕೂಡಲೇ ಸ್ಪಂದಿಸಿ ಕ್ರಮ ವಹಿಸಲಾಗುವುದು. ಯಾವುದೇ ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕಪಡುವ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News