ಬೀದರ್ | ಮೀನು ಮಾರಾಟಕ್ಕೆ ಕಟ್ಟಡ ನಿರ್ಮಿಸಲು ಜಿಲ್ಲಾಧಿಕಾರಿ ಜೊತೆ ಮಾತಾಡಿದ್ದೇನೆ : ಮಾಲಾ ಬಿ.ನಾರಾಯಣ
ಬೀದರ್ : ಮೀನುಗಾರರಿಗಾಗಿ ಮೀನು ಮಾರಾಟ ಮಾಡಲು ಕಟ್ಟಡ ನಿರ್ಮಾಣ ಮಾಡುವುದಕ್ಕಾಗಿ ಈಗಾಗಲೇ ಜಿಲ್ಲಾಧಿಕಾರಿ ಜೊತೆ ಮಾತನಾಡಿದ್ದೇನೆ ಎಂದು ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷೆ ಮಾಲಾ ಬಿ.ನಾರಾಯಣ ಅವರು ತಿಳಿಸಿದ್ದಾರೆ.
ಬೀದರ್ ತಾಲೂಕಿನ ಜನವಾಡ ಕೆರೆ ಹತ್ತಿರ ಮೀನುಗಾರಿಕೆ ಮೀನು ಕೃಷಿಕರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಮೀನುಗಾರರ ಯಾವುದೇ ಸಮಸ್ಯೆ ಇದ್ದರೂ ಜಿಲ್ಲೆಯ ಅಧಿಕಾರಿಗಳ ಗಮನಕ್ಕೆ ತರಬೇಕು ಇಲ್ಲದಿದ್ದರೆ ನನ್ನ ಗಮನಕ್ಕೆ ತರಬೇಕು. ಆ ಸಮಸ್ಯೆಯನ್ನು ಶೀಘ್ರದಲ್ಲಿಯೇ ಪರಿಹರಿಸುವ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ.ಮಲ್ಲಿಕಾರ್ಜುನ್ ನಿಂಗದಳ್ಳಿ ಅವರು ಮೀನು ಕೃಷಿಯ ಬಗ್ಗೆ ಸಮಗ್ರವಾದ ಮಾಹಿತಿ ನೀಡಿದರು.
ಲೀಡ್ ಬ್ಯಾಂಕ್ ವ್ಯವಸ್ಥಾಪಕ ಸುನಿಲಕುಮಾರ್, ಮೀನುಗಾರಿಕೆ ಜಂಟಿ ನಿರ್ದೇಶಕ ಷಡಕ್ಷರಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಮೀನುಗಾರಿಕೆ ಉಪ ನಿರ್ದೇಶಕಿ ಜಾನಮ್ಮ, ಮೀನುಗಾರಿಕೆ ಸಹಾಯಕ ನಿರ್ದೇಶಕ ನದೀಮ್ ಊರ ರೆಹಮಾನ್, ಸಹಾಯಕ ನಿರ್ದೇಶಕ ಗೌತಮ್ ಶೀಲ ಹಾಗೂ ಗಣೇಶ್ ಸೇರಿದಂತೆ ಅನೇಕ ಮೀನುಗಾರಿಕೆ ಇಲಾಖೆಯ ಸಿಬ್ಬಂದಿ ಹಾಗೂ ಜನವಾಡ ಗ್ರಾಮ ಪಂಚಾಯತ್ ಅಧ್ಯಕ್ಷ, ಕಾರ್ಯದರ್ಶಿ, ಗ್ರಾಮಸ್ಥರು ಭಾಗವಹಿಸಿದ್ದರು.