×
Ad

ಬೀದರ್ | ಸಂಗೊಳಗಿ ಗ್ರಾಮದಲ್ಲಿ ಜೆಸಿಬಿ ಮೂಲಕ ಅಕ್ರಮ ಕಟ್ಟಡಗಳ ತೆರವು

Update: 2025-06-27 21:09 IST

ಬೀದರ್ : ಬೀದರ್ ತಾಲ್ಲೂಕಿನ ಸಂಗೊಳಗಿ ಗ್ರಾಮದಲ್ಲಿ ಅಕ್ರಮವಾಗಿ ನಿರ್ಮಿಸಿದ ಕಟ್ಟಡಗಳನ್ನು ಜೂ.27ರಂದು ತೆರವುಗೊಳಿಸಲಾಯಿತು.

ಗ್ರಾಮದ ಮುಖ್ಯ ರಸ್ತೆ ಮೇಲೆ ಹಲವು ಕಟ್ಟಡಗಳನ್ನು ಅಕ್ರಮವಾಗಿ ನಿರ್ಮಿಸಲಾಗಿತ್ತು. ಇದರಿಂದ ಸಾರ್ವಜನಿಕರ ಓಡಾಟಕ್ಕೆ ತೊಂದರೆ ಉಂಟಾಗುತ್ತಿತ್ತು. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಜಾತ ನಂದಿ, ಗ್ರಾಮ ಪಂಚಾಯತ್ ಅಧ್ಯಕ್ಷ ಶಾಂತವೀರ್ ಹಜ್ಜರಗಿ ಹಾಗೂ ಪಿಎಸ್ಐ ಕಿರಣ ಧೋತ್ರೆ ಅವರ ನೇತೃತ್ವದಲ್ಲಿ ಜೆಸಿಬಿ ಮೂಲಕ ಅಕ್ರಮ ಕಟ್ಟಡಗಳು ತೆರವುಗೊಳಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್‌ ಸದಸ್ಯರು, ಸಿಬ್ಬಂದಿ ಹಾಗೂ ಪೊಲೀಸ್ ಅಧಿಕಾರಿ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News