×
Ad

ಬೀದರ್ | ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಗುವುದು : ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

Update: 2025-08-07 17:33 IST

ಬೀದರ್ : ಪ್ರತಿ ವರ್ಷದಂತೆ ಈ ವರ್ಷವು ಆ.15 ರಂದು ಸ್ವಾತಂತ್ರ್ಯೊತ್ಸವ ದಿನಾಚರಣೆಯನ್ನು ಎಲ್ಲರೂ ಸೇರಿ ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು.

ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರೆದ ಸ್ವಾತಂತ್ರ್ಯೋತ್ಸವ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತಮಗೆ ವಹಿಸಿದ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಧ್ವಜಾರೋಹಣ ಸಂದರ್ಭದಲ್ಲಿ ಎಲ್ಲೂ ಧ್ಜಜ ತಲೆ ಕೆಳಗಾಗದಂತೆ ನೋಡಿಕೊಳ್ಳಬೇಕು ಎಂದು ವಿವಿಧ ಇಲಾಖೆಯ ಅಧಿಕಾರಿಗಳಿಗೆ ಹೇಳಿದರು.

ಆ.15 ರ ಬೆಳಿಗ್ಗೆ 8 ಗಂಟೆಗೆ ಎಲ್ಲಾ ಸರಕಾರಿ ಹಾಗೂ ಅರೆ ಸರಕಾರಿ ಕಚೇರಿ ಮತ್ತು ಶಾಲಾ ಕಾಲೇಜುಗಳಲ್ಲಿ ಧ್ವಜಾರೋಹಣ ನೆರವೇರಿಸಿ ಎಲ್ಲರೂ ಜಿಲ್ಲಾ ನೆಹರು ಕ್ರೀಡಾಂಗಣದಲ್ಲಿ 8:45 ಗಂಟೆಗೆ ಬಂದು ಸೇರಬೇಕು. 9 ಗಂಟೆಗೆ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಇರುತ್ತದೆ. ಆ. 14 ಮತ್ತು 15 ರಂದು ಎರಡು ದಿನ ಎಲ್ಲಾ ಸರಕಾರಿ ಕಛೇರಿಗಳ ಮೇಲೆ ದೀಪಾಲಂಕಾರ ಮಾಡಬೇಕು ಎಂದು ತಿಳಿಸಿದರು.

ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಸಲು ಒಂದು ಸಮಿತಿ ರಚಿಸಲಾಗಿದೆ. ಲೋಕೋಪಯೋಗಿ ಇಲಾಖೆಯವರು ಜಿಲ್ಲಾ ನೆಹರು ಕ್ರೀಡಾಂಗಣದಲ್ಲಿ ಮಳೆ ನೀರು ನಿಲ್ಲದಂತೆ ಮತ್ತು ವೇದಿಕೆ ಅಚ್ಚುಕಟ್ಟಾಗಿ ನಿರ್ವಹಿಸಬೇಕು. ನಗರಸಭೆ ವತಿಯಿಂದ ಕ್ರೀಡಾಂಗಣದ ಸ್ವಚ್ಚತೆ ಮತ್ತು ಮೂಲಭೂತ ಸೌಕರ್ಯಗಳು ನೋಡಿಕೊಳ್ಳಬೇಕು. ಶಿಕ್ಷಣ ಇಲಾಖೆ ವತಿಯಿಂದ ಶಾಲಾ ಕಾಲೇಜುಗಳಲ್ಲಿ ಪ್ರಬಂಧ ಹಾಗೂ ಭಾಷಣ ಸ್ಪರ್ಧೆ ಏರ್ಪಡಿಸುವುದರ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಬೇಕು ಎಂದು ಸೂಚಿಸಿದರು.

ಈ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಅಪರ ಜಿಲ್ಲಾಧಿಕಾರಿ ಶಿವಾನಂದ್ ಬಿ.ಕರಾಳೆ, ಸಹಾಯಕ ಆಯುಕ್ತ ಎಂ.ಡಿ.ಶಕೀಲ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೆಶಕ ಚಂದ್ರಕಾಂತ್ ಶಾಬಾದಕರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ್ ಸಿಂಧೆ, ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ವಿಜಯಕುಮಾರ್ ಸೋನಾರೆ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸುರೇಶ್ ಚನ್ನಶೆಟ್ಟಿ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿ ಹಾಗೂ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News