ಬೀದರ್ | ಐಪಿಎಲ್ ವಿಜಯೋತ್ಸವದ ವೇಳೆ ಮೃತಪಟ್ಟ ಕುಟುಂಬಗಳಿಗೆ ಪರಿಹಾರ ನೀಡಲು ಜನತಾದಳ ಮನವಿ
Update: 2025-06-05 20:57 IST
ಬೀದರ್ : ಐಪಿಎಲ್ ವಿಜಯೋತ್ಸವ ಆಚರಣೆಯಲ್ಲಿ ಮೃತಪಟ್ಟ ಕುಟುಂಬಗಳಿಗೆ 1 ಕೋಟಿ ರೂ. ಪರಿಹಾರ ಧನ ಹಾಗೂ ಕುಟುಂಬದಲ್ಲಿ ಒಬ್ಬರಿಗೆ ಸರ್ಕಾರಿ ನೌಕರಿ ನೀಡಬೇಕು. ಹಾಗೆಯೇ ಗಾಯಾಳುಗಳಿಗೆ 25 ಲಕ್ಷ ರೂ. ಪರಿಹಾರ ಒದಗಿಸಬೇಕು ಎಂದು ಜಿಲ್ಲಾ ಜನತಾದಳ ಯುವ ಘಟಕವು ಮನವಿ ಮಾಡಿದೆ.
ಇಂದು ಜಿಲ್ಲಾ ಜನತಾದಳ ಯುವ ಘಟಕದ ಜಿಲ್ಲಾಧ್ಯಕ್ಷ ಜಾಫೇಟ್ ರಾಜ್ ಕಡ್ಯಾಳ್ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯಪಾಲರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ, ಐಪಿಎಲ್ ವಿಜಯೋತ್ಸವದ ಆಚರಣೆಯಲ್ಲಿ ನಡೆದ ಘಟನೆಯ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ, ಉಪಮುಖ್ಯಂತ್ರಿ ಹಾಗೂ ಗೃಹಸಚಿವರು ರಾಜಿನಾಮೆ ನೀಡುವಂತೆ ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ಯುವ ಘಟಕದ ಉಪಾಧ್ಯಕ್ಷ ರವಿ ಸಿರ್ಸಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ್ ಶಾಹಪೂರೆ, ಜಿಲ್ಲಾ ವಿಧ್ಯಾರ್ಥಿ ಘಟಕದ ಅಧ್ಯಕ್ಷ ಅಭಿ ಕಾಳೆ, ರಾಜಕುಮಾರ್ ಸೋನೆ ಹಾಗೂ ಜೀವನ ರಿಕ್ಕೆ ಸೇರಿದಂತೆ ಇತರರು ಉಪಸ್ಥಿತರಿದ್ದರು.