×
Ad

ಬೀದರ್| ಮೇ.19ರಂದು ಬೃಹತ್ ಉದ್ಯೋಗ ಮೇಳ

Update: 2026-05-18 18:26 IST

ಬೀದರ್ : ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಡಾ. ಪ್ರಶಾಂತ್ ಮಾಶೆಟ್ಟಿ ಮಹಾವಿದ್ಯಾಲಯದ ವತಿಯಿಂದ ಮೇ.19 ರಂದು ಜಿಲ್ಲೆಯಲ್ಲೇ ಪ್ರಥಮ ಬಾರಿಗೆ ‘ಅಕೌಂಟಿಂಗ್ ಟ್ಯಾಲೆಂಟ್ ಸರ್ಚ್-2026’ ಪರೀಕ್ಷೆ ಹಾಗೂ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲೆ ಸಪ್ನಾ ಎಂ. ಮಾಶೆಟ್ಟಿ ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಕಳೆದ 16 ವರ್ಷಗಳಿಂದ ಬಿಬಿಎ, ಬಿಕಾಂ, ಬಿಎ ಹಾಗೂ ಬಿಸಿಎ ಪದವಿಗಳಲ್ಲಿ ಉನ್ನತ ಶಿಕ್ಷಣ ನೀಡುತ್ತಾ ಬಂದಿರುವ ಸಂಸ್ಥೆಯು, ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕಾಗಿ ಈ ಮಹತ್ವದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದು ಅವರು ಹೇಳಿದ್ದಾರೆ.

ಪಿಯುಸಿ ಮತ್ತು ಪದವಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಈ ಪರೀಕ್ಷೆಯಲ್ಲಿ ಭಾಗವಹಿಸಬಹುದು. ಈ ಪರೀಕ್ಷೆಯಲ್ಲಿ ಪ್ರಥಮ ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಪ್ರಮಾಣ ಪತ್ರ ನೀಡಿ ಗೌರವಿಸಲಾಗುವುದು. ಹಾಗೆಯೇ ಅದೇ ದಿನ ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ. 20ಕ್ಕಿಂತ ಹೆಚ್ಚಿನ ಕಂಪೆನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿದ್ದು, ಪಿಯುಸಿ ಮತ್ತು ಪದವಿ ಮುಗಿಸಿದ ವಿದ್ಯಾರ್ಥಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಕೋರಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News