ಬೀದರ್: 2026-27ನೇ ಸಾಲಿನ ಬೀದರ್ ವಿಶ್ವವಿದ್ಯಾಲಯದ ಅಂತರ್ ಕಾಲೇಜು ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ನಗರದ ಕರ್ನಾಟಕ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಕ್ರೀಡಾಪಟುಗಳು ಪ್ರಥಮ ಸ್ಥಾನ ಗಳಿಸಿದ್ದಾರೆ. ನ. 3ರಂದು ನಡೆದ ಸ್ಪರ್ಧೆಯಲ್ಲಿ ಕಾಲೇಜಿನ ತಂಡ ಈ ಸಾಧನೆ ಮಾಡಿದೆ.

ಕಾಲೇಜಿನ ಕ್ರೀಡಾಪಟುಗಳಾದ ಪ್ರವೀಣ್, ಯುವರಾಜ್, ಪಪ್ಪು, ಸಂಗಮೇಶ್ ಹಾಗೂ ಸೋನಾಲ್‌ವೀರ್ ಸ್ಪರ್ಧೆಯಲ್ಲಿ ಭಾಗವಹಿಸಿ ತಂಡಕ್ಕೆ ಪ್ರಥಮ ಸ್ಥಾನ ತಂದುಕೊಟ್ಟಿದ್ದಾರೆ.

ಇದೇ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡಿದ ಬಿ.ಎ. ಮೂರನೇ ಸೆಮಿಸ್ಟರ್ ವಿದ್ಯಾರ್ಥಿಗಳಾದ ರಾಜಕುಮಾರ್ ಮತ್ತು ಪ್ರವೀಣ್ ಅವರು ಬೀದರ್ ವಿಶ್ವವಿದ್ಯಾಲಯದ ತಂಡಕ್ಕೆ ಆಯ್ಕೆಯಾಗಿದ್ದಾರೆ. ಇವರು ನ. 7ರಂದು ಮಂಗಳೂರು ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಕರ್ನಾಟಕ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಸವರಾಜ್ ಜಾಬಶೆಟ್ಟಿ, ಉಪಾಧ್ಯಕ್ಷ ಬಿ.ಜಿ. ಶೆಟಕಾರ್, ಕಾರ್ಯದರ್ಶಿ ಸತೀಷ್ ಪಾಟೀಲ್, ಜಂಟಿ ಕಾರ್ಯದರ್ಶಿ ಶಿವಾನಂದ್ ಗಾದಗೆ, ಆಡಳಿತ ಮಂಡಳಿಯ ಸದಸ್ಯರು, ಕಾಲೇಜಿನ ಪ್ರಾಂಶುಪಾಲ ಸೋಮನಾಥ್ ಬಿರಾದಾರ್, ಉಪಪ್ರಾಂಶುಪಾಲ ಡಾ. ಶಶೀಧರ್ ಪಾಟೀಲ್, ದೈಹಿಕ ಶಿಕ್ಷಣ ನಿರ್ದೇಶಕ ಡಾ. ಮಾದಯ್ಯ ಸ್ವಾಮಿ ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor