×
Ad

ಬೀದರ್ | ಬಾಲಕಾರ್ಮಿಕ ನಿರ್ಮೂಲನಾ ಅಭಿಯಾನದ ಆಟೋ ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ

Update: 2025-02-07 17:07 IST

ಬೀದರ್ : ಬಾಲಕಾರ್ಮಿಕ ನಿರ್ಮೂಲನಾ ಅಭಿಯಾನದ ಆಟೋ ಪ್ರಚಾರ ಕಾರ್ಯಕ್ರಮಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಬೀದರ್ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕರದ ಸದಸ್ಯ ನ್ಯಾ.ಪ್ರಕಾಶ್ ಅರ್ಜುನ್ ಬನಸೊಡೆ ಅವರು ಚಾಲನೆ ನೀಡಿದರು.

ಇಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಕಾರ್ಮಿಕ ಇಲಾಖೆ ಅವರ ಸಂಯುಕ್ತಾಶ್ರಯದಲ್ಲಿ ಬಾಲಕಾರ್ಮಿಕ ನಿರ್ಮೂಲನ ಅಭಿಯಾನ ಹಾಗೂ ಅಸಂಘಟಿತ ಕಾರ್ಮಿಕರಿಗೆ ಗುರುತಿನ ಚೀಟಿ ವಿತರಣೆ ಅಂಗವಾಗಿ ನಗರದ ಸವಿತಾ ಭವನದಲ್ಲಿ ʼಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮʼ ಜರುಗಿತು.

ಆಟೋ ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನ್ಯಾ.ಪ್ರಕಾಶ್ ಅರ್ಜುನ್ ಬನಸೊಡೆ ಅವರು, ಅಸಂಘಟಿತ ಕಾರ್ಮಿಕರಿಗೆ ಮತ್ತು ಆಟೋ ಚಾಲಕರಿಗೆ ಗುರುತಿನ ಚೀಟಿ ವಿತರಿಸಿ ಜಿಲ್ಲಾ ಕಾನೂನು ಸೇವೆ ಪ್ರಾಧಿಕಾರದ ಸವಲತ್ತುಗಳ ಬಗ್ಗೆ ಅರಿವು ಮೂಡಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ನಾಗೇಂದ್ರ ಬಿರಾದಾರ್, ರೇಣುಕಾ ಜೋಪಾಟಿ, ಕಾರ್ಮಿಕ ಇಲಾಖೆಯ ಕಾರ್ಮಿಕ ನಿರೀಕ್ಷಕಿ ಕೆ.ಸುವರ್ಣ, ಶಿವರಾಜ್ ಬಿರಾದಾರ್, ಆಕಾಶ್ ಸಜ್ಜನ್, ಅರ್ಜುನ್ ಸಿತಾಳಗೇರಾ ಹಾಗೂ ಆಟೋ ಚಾಲಕರ ಅಸಂಘಟಿತ ಕಾರ್ಮಿಕರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News