Bidar | ಎಸ್‌ಐಆರ್ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ
ಬೀದರ್ : ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ನಗರದ ಬರಿದ್ ಶಾಹಿ ಉದ್ಯಾನವನದಿಂದ ಸೈಕಲ್ ಹಾಗೂ ನಡಿಗೆ ಜಾಥಾ ಅಭಿಯಾನಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಬದೋಲೆ ಹಾಗೂ ಮಹಾನಗರ ಪಾಲಿಕೆ ಆಯುಕ್ತ ಮುಕುಲ್ ಜೈನ್ ಚಾಲನೆ ನೀಡಿದರು.
ಜಾಥಾವು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಮತದಾರರ ಪಟ್ಟಿ ಪರಿಷ್ಕರಣೆಯ ಮಹತ್ವದ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಿತು.
ಬಳಿಕ ನಗರದ ಕೋಟೆ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಎಸ್‌ಐಆರ್ ಕುರಿತು ಸಂಪೂರ್ಣ ಮಾಹಿತಿ ನೀಡಿ, ಪ್ರತಿಯೊಬ್ಬ ಅರ್ಹ ಮತದಾರರು ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ರಾಜ್ಯ ಮಟ್ಟದ ಮಾಸ್ಟರ್ ಟ್ರೇನರ್ ಡಾ. ಗೌತಮ್ ಅರಳಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ್ ಪೂಜಾರಿ, ಅಲ್ಪಸಂಖ್ಯಾತ ಇಲಾಖೆಯ ಅಧಿಕಾರಿ ಬಳೆರಾಮ್, ಸಂತೋಷ್ ಮಾಕಾ ಹಾಗೂ ಮಾಹಾನಗರ ಪಾಲಿಕೆಯ ಅಧಿಕಾರಿಗಳು ಜಾಥಾದಲ್ಲಿ ಭಾಗವಹಿಸಿದ್ದರು.