ಬೀದರ್ | ಸಾರ್ವಜನಿಕರಿಗೆ ಶ್ರವಣ ಸೇವೆಗಳ ಸೌಲಭ್ಯ ಒದಗಿಸುವಲ್ಲಿ ನಾವೆಲ್ಲರೂ ಕೈಜೋಡಿಸೋಣ : ಡಾ.ಧ್ಯಾನೇಶ್ವರ್ ನಿರಗುಡೆ
ಬೀದರ್ : ಜಿಲ್ಲೆಯ ಎಲ್ಲಾ ಸಾರ್ವಜನಿಕರಿಗೆ ಶ್ರವಣ ಸೇವೆಗಳ ಸೌಲಭ್ಯ ಒದಗಿಸುವಲ್ಲಿ ನಾವೆಲ್ಲರು ಕೈಜೋಡಿಸೋಣ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಧ್ಯಾನೇಶ್ವರ್ ನಿರಗುಡೆ ತಳಿಸಿದ್ದಾರೆ.
ಇಂದು ನಗರದ ಜಿಲ್ಲಾ ನರ್ಸಿಂಗ್ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ʼಬದಲಾಗುತ್ತಿರುವ ಮನಸ್ಥಿತಿ ಕಿವಿ ಮತ್ತು ಶ್ರವಣ ಆರೈಕೆಯನ್ನು ಎಲ್ಲರಿಗೂ ವಾಸ್ತವವಾಗಿಸಲು ನಿಮ್ಮನ್ನು ಸಶಕ್ತಗೊಳಿಸಿಕೊಳ್ಳಿʼ ಎಂಬ ಘೋಷ ವಾಕ್ಯದೊಂದಿಗೆ ವಿಶ್ವ ಶ್ರವಣ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನಮ್ಮ ಜಿಲ್ಲೆಯಲ್ಲಿ ನವಜಾತ ಶಿಶುಗಳ ಉಚಿತ ಶ್ರವಣ ತಪಾಸಣೆಯನ್ನು ಈಗಾಗಲೇ ಬ್ರೀಮ್ಸ್ ಬೋಧಕ ಆಸ್ಪತ್ರೆ, ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಹಾಗೂ ಔರಾದ್ ನ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಮಾಡಲಾಗುತ್ತಿದ್ದು, ಶ್ರವಣ ಪರಿಕ್ಷೆ ಮಾಡಿಸಿ ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಎನ್ ಪಿ ಪಿ ಸಿ ಡಿ ಕಾರ್ಯಕ್ರಮದ ನೋಡಲ್ ಅಧಿಕಾರಿ ಡಾ.ದಿಲೀಪ್ ಡೋಗ್ರೆ, ಡಾ.ನಿಶಾ ಕೌರ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಅಹೆಮುದ್ದಿನ್, ಜಿಲ್ಲಾ ಆರ್ ಸಿ ಹೆಚ್ ಅಧಿಕಾರಿ ಡಾ.ಶಿವಶಂಕರ್ ಬಿ., ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಕಿರಣ ಪಾಟೀಲ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಶಂಕರೆಪ್ಪಾ ಬೊಮ್ಮಾ, ಡಾ.ರಾಜಶೇಖರ್ ಪಾಟೀಲ್, ಡಾ.ಸಂಜೀವಕುಮಾರ್ ಪಾಟೀಲ್, ತಾಲ್ಲೂಕು ಆರೋಗ್ಯ ಅಧಿಕಾರಿಗಳಾದ ಡಾ.ಸಂಗಾರೆಡ್ಡಿ, ಡಾ.ಸುಮಂತ್ ಕಣಜಿಕರ್, ಇ ಎನ್ ಟಿ ತಜ್ಞ ವೆಂಕಟರಮಣ, ಡಾ.ಲಕ್ಷಮಿಕಾಂತ್ ವಲ್ಲೆಪುರೆ, ಬಿಲಾಲ್, ಸೋಹೇಲ್, ಮುದ್ಸರ್, ಮಹೇಶರೆಡ್ಡಿ, ರೂಸ್ವೆಲ್ಟ್, ಶಿವಾನಂದ್ ಹಾಗೂ ಶಾಲುಬಾಯಿ ಸೇರಿದಂತೆ ಇತರರು ಉಪಸ್ಥಿತರಿದ್ದರು.