×
Ad

ಬೀದರ್ | ಸವಿತಾ ಮಹರ್ಷಿ ಜಯಂತಿ ಅದ್ದೂರಿಯಾಗಿ ಆಚರಿಸೋಣ : ಎಂ.ಡಿ.ಶಕೀಲ್

Update: 2025-01-30 21:31 IST

ಬೀದರ್ : ಫೆ.4 ರಂದು ನಡೆಯುವ ಸವಿತಾ ಮಹರ್ಷಿ ಅವರ ಜಯಂತಿಯನ್ನು ಎಲ್ಲರೂ ಸೇರಿ ಅದ್ದೂರಿಯಾಗಿ ಆಚರಿಸೋಣ ಎಂದು ಸಹಾಯಕ ಆಯುಕ್ತ ಎಂ.ಡಿ.ಶಕೀಲ್ ಅವರು ಹೇಳಿದರು.

ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆದ ಸವಿತಾ ಮಹರ್ಷಿ ಅವರ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಯಂತಿಯ ದಿನದಂದು ಎಲ್ಲಾ ಸರಕಾರಿ, ಅರೆ ಸರಕಾರಿ, ಸಂಘ ಸಂಸ್ಥೆಗಳಲ್ಲಿ ಬೆಳಿಗ್ಗೆ 10 ಗಂಟೆಗೆ ಸವಿತಾ ಮಹರ್ಷಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ನಂತರ 10:30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸವಿತಾ ಮಹರ್ಷಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ನಂತರ ಜಿಲ್ಲಾಧಿಕಾರಿ ಕಚೇರಿಯಿಂದ ಸವಿತಾ ಮಹರ್ಷಿ ಅವರ ಭಾವಚಿತ್ರದ ಮೆರವಣಿಗೆ ಪ್ರಾರಂಭ ಮಾಡಲಾಗುವುದು. ಮೆರವಣಿಗೆಯು ಶಿವಾಜಿವೃತ್ತ, ಭಗತಸಿಂಗ ವೃತ್ತ, ಬಸವೇಶ್ವರ ವೃತ್ತ, ಅಂಬೇಡ್ಕರ್ ವೃತ್ತ, ಜನರಲ್ ಕರಿಯಪ್ಪ ವೃತ್ತದ ಮಾರ್ಗವಾಗಿ ಸಂಚರಿಸಿ ನೇರವಾಗಿ ಪೂಜ್ಯ ಚನ್ನಬಸವ ಪಟ್ಟದೇವರ ರಂಗಮಂದಿರಕ್ಕೆ ಸಾಗುತ್ತದೆ. ರಂಗಮಂದಿರದಲ್ಲಿ ಮಧ್ಯಾಹ್ನ 12 ಗಂಟೆಗೆ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ತಾವೆಲ್ಲರೂ ಭಾಗವಹಿಸಬೇಕು. ಹಾಗೆಯೇ ನಗರಸಭೆ ವತಿಯಿಂದ ಕಾರ್ಯಕ್ರಮಕ್ಕೆ ಆಗಮಿಸಿದವರಿಗೆ ನೀರಿನ ಹಾಗೂ ಇತರೆ ವ್ಯವಸ್ಥೆ ಮಾಡಬೇಕು ಎಂದು ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಮೆರವಣಿಗೆಯಲ್ಲಿ ಕಲಾ ತಂಡಗಳನ್ನು ಭಾಗವಹಿಸುವಂತೆ ನೋಡಿಕೊಳ್ಳಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ್ ಸಿಂಧೆ ಹಾಗೂ ಸವಿತಾ ಸಮಾಜದ ಮುಖಂಡರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News