×
Ad

ಬೀದರ್ | ಸರಕಾರಿ ಶಾಲೆಗಳನ್ನು ಬೆಳೆಸಲು ಕಂಕಣಬದ್ದರಾಗಿ ದುಡಿಯೋಣ : ಉತ್ತಮ ಶಿಂಧೆ

Update: 2025-02-16 17:10 IST

ಬೀದರ್ : ಸರ್ಕಾರಿ ಶಾಲೆಗಳು ಬೆಳೆಸಲು ಕಂಕಣಬದ್ದರಾಗಿ ದುಡಿಯೋಣ ಎಂದು ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಉತ್ತಮ್ ಶಿಂಧೆ ಹೇಳಿದರು.

ಶನವಾರ ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯ ಹಾಗೂ ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ವತಿಯಿಂದ ಭಾಲ್ಕಿಯ ಬಿಆರ್‌ಸಿ ಕಚೇರಿಯಲ್ಲಿ ನಡೆದ ನೂತನವಾಗಿ ನೇಮಕವಾದ ಜಿಪಿಟಿ ಶಿಕ್ಷಕರಿಗೆ ಸ್ವಾಗತ ಸಮಾರಂಭ ಹಾಗೂ ಶಿಕ್ಷಕರ ಗುರುತಿನ ಚೀಟಿ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರತಿಯೊಬ್ಬ ಶಿಕ್ಷಕರು ಉತ್ತಮವಾಗಿ ಕೆಲಸ ನಿರ್ವಹಿಸಬೇಕು. ಸರಕಾರಿ ಶಾಲೆ ಬೆಳೆಸಲು ನಾವೆಲ್ಲರೂ ನಿರ್ಭಿತಿಯಿಂದ ಕೆಲಸ ಮಾಡೋಣ. ಮಕ್ಕಳ ಭವಿಷ್ಯ ಶಿಕ್ಷಕರ ಕೈಯಲ್ಲಿದ್ದು, ವಿದ್ಯಾರ್ಥಿಗಳ ಭವಿಷ್ಯ ಚೆನ್ನಾಗಿ ರೂಪಿಸಬೇಕಿದೆ ಎಂದರು.

ಕ್ಷೇತ್ರ ಸಮನ್ವಯಾಧಿಕಾರಿ ಮನೋಹರ ಹೋಳ್ಕರ್ ಅವರು ಮಾತನಾಡಿ, ಸರ್ಕಾರಿ ಶಾಲೆ ಮಕ್ಕಳ ಗುಣಮಟ್ಟದ ಶಿಕ್ಷಣಕ್ಕಾಗಿ ಎಲ್ಲರೂ ಚೆನ್ನಾಗಿ ಕೆಲಸ ಮಾಡಬೇಕು. ಇದರಲ್ಲಿ ಜಿಪಿಟಿ ಶಿಕ್ಷಕರ ಪಾತ್ರ ಪ್ರಮುಖವಾಗಿದೆ. ಶಿಕ್ಷಕರು ಒಳ್ಳೆಯ ರೀತಿಯಿಂದ ಶಿಕ್ಷಣ ನೀಡಿದರೆ ವಿದ್ಯಾರ್ಥಿಗಳ ಒಳ್ಳೆಯ ಜೀವನ ರೂಪಿಸಬಹುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಂಘದ ವತಿಯಿಂದ ನೂತನ ಶಿಕ್ಷಕರಿಗೆ ಸ್ವಾಗತ ಮಾಡಿ, ಗುರುತಿನ ಚೀಟಿ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ನಿರ್ದೇಶಕ ನಿರಂಜಪ್ಪ ಪಾತ್ರೆ, ಬಸವರಾಜ್ ದಾನಾ, ಪ್ರಾಥಮಿಕ ಶಿಕ್ಷಕರ ಸಂಘದ ತಾಲ್ಲೂಕ ಅಧ್ಯಕ್ಷ ಸೂರ್ಯಕಾಂತ್ ಸುಂಟೆ, ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ರಾಜಪ್ಪ ಪಾಟೀಲ್ ಹಾಗೂ ಪ್ರೌಢ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಬಾಲಾಜಿ ಕಾಂಬಳೆ ಸೇರಿದಂತೆ ಇತರರು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News