×
Ad

ಬೀದರ್: ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ಕಚೇರಿ, ನಿವಾಸದ ಮೇಲೆ ಲೋಕಾಯುಕ್ತ ದಾಳಿ

Update: 2024-11-12 10:54 IST

ಬೀದರ್: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನಲೆಯಲ್ಲಿ ಬೀದರ್ ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ರವೀಂದ್ರ ರೊಟ್ಟಿಯವರ ನಿವಾಸ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ಇಂದು ಬೆಳಗ್ಗೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಲೋಕಾಯುಕ್ತ ಡಿವೈಎಸ್ಪಿ ನೇತೃತ್ವದಲ್ಲಿ ಅಧಿಕಾರಿಗಳ ತಂಡಗಳು ನಗರದ ಗುಂಪಾದಲ್ಲಿರುವ ರವೀಂದ್ರರ ನಿವಾಸ ಮತ್ತು ಕಚೇರಿ ಮೇಳೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.

ರವೀಂದ್ರ ರೊಟ್ಟಿ ಈ ಮೊದಲು ಬೀದರ್ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಿರಸ್ತೇದಾರ ಹಾಗೂ ಬಿಬಿಎಂಪಿಯ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News