×
Ad

ಬೀದರ್ | ಎ.19, 21 ರಂದು ಲೋಕಾಯುಕ್ತ ಅಹವಾಲು ಸಭೆ

Update: 2025-04-18 22:30 IST

ಬೀದರ್ : ಲೋಕಾಯುಕ್ತ ಪೊಲೀಸ್ ಠಾಣೆಯ ವತಿಯಿಂದ ಭಾಲ್ಕಿ, ಕಮಲನಗರ, ಬಸವಕಲ್ಯಾಣ ಹಾಗೂ ಹುಲಸೂರ ಪಟ್ಟಣಗಳ ಪ್ರವಾಸಿ ಮಂದಿರಗಳಲ್ಲಿ ಸಾರ್ವಜನಿಕ ಕುಂದುಕೊರತೆ ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕರಿಗೆ ಸರ್ಕಾರಿ ಅಧಿಕಾರಿಗಳಿಂದ ತಮಗೆ ಆಗಬೇಕಾದ ಕೆಲಸಗಳಲ್ಲಿ ವಿಳಂಬವಾಗಿದ್ದರೆ, ಅಧಿಕಾರಿಗಳು ನ್ಯಾಯ ಸಮ್ಮತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ತೊಂದರೆ ನೀಡುತ್ತಿದ್ದರೆ ಅಥವಾ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದೂರುಗಳಿದ್ದಲ್ಲಿ ಸಾರ್ವಜನಿಕರು ಸಭೆಯಲ್ಲಿ ಭಾಗವಹಿಸಿ ಪರಿಹಾರ ಪಡೆಯಬೇಕು ಎಂದು ಅವರು ಹೇಳಿದ್ದಾರೆ.

ಸಭೆಗಳ ವಿವರ :

ಎ.19 ರಂದು ಬೆಳಿಗ್ಗೆ 9 ರಿಂದ 11 ಗಂಟೆವರೆಗೆ ಭಾಲ್ಕಿ ಪ್ರವಾಸಿ ಮಂದಿರ, ಮಧ್ಯಾಹ್ನ 12 ರಿಂದ 2 ಗಂಟೆವರೆಗೆ ಕಮಲನಗರ ಪ್ರವಾಸಿ ಮಂದಿರದಲ್ಲಿ ಹಾಗೂ ಎ.21 ರಂದು ಬೆಳಿಗ್ಗೆ 9 ರಿಂದ 11 ಗಂಟೆವರೆಗೆ ಬಸವಕಲ್ಯಾಣದ ಪ್ರವಾಸಿ ಮಂದಿರ ಮತ್ತು ಮಧ್ಯಾಹ್ನ 12 ರಿಂದ 2 ಗಂಟೆವರೆಗೆ ಹುಲಸೂರ್ ಪ್ರವಾಸಿ ಮಂದಿರದಲ್ಲಿ ಸಭೆಗಳು ಜರುಗಲಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಸಾರ್ವಜನಿಕರು ತಮ್ಮ ಕುಂದುಕೊರತೆಗಳನ್ನು ನೇರವಾಗಿ ಸ್ಥಳದಲ್ಲಿಯೇ ದೂರು ಅರ್ಜಿಯ ಫಾರಂ ನಂ 1 ಮತ್ತು 2 ತೆಗೆದುಕೊಂಡು ದೂರು ನೀಡಲು ಅನುಕೂಲ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News