×
Ad

ಬೀದರ್ | ಆ.13 ರಂದು ಲೋಕಾಯುಕ್ತ ಅಹವಾಲು ಸಭೆ

Update: 2025-08-11 19:12 IST

ಬೀದರ್ : ಹುಮನಾಬಾದ್ ಪ್ರವಾಸಿ ಮಂದಿರದಲ್ಲಿ ಆ.13 ರಂದು ಲೋಕಾಯುಕ್ತ ಅಹವಾಲು ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಬೀದರ್‌ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಅಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆ ಸಾರ್ವಜನಿಕ ಕುಂದು ಕೊರತೆ, ಅಹವಾಲು ಸಭೆ ನಡೆಯಲಿದ್ದು, ಸಾರ್ವಜನಿಕರಿಗೆ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಕೆಲಸ ವಿಳಂಬ ಮಾಡುತ್ತಿದ್ದರೆ, ಕಾರಣ ಇಲ್ಲದೆ ಅರ್ಜಿ ತಿರಸ್ಕರಿಸುತ್ತಿದ್ದರೆ, ಕಚೇರಿಗೆ ಅಲೆದಾಡಿಸುತ್ತಿದ್ದರೆ ಅಥವಾ ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡಿಕೊಡಲು ಯಾರಾದರೂ ಲಂಚ ಕೇಳಿದರೆ ಸಭೆಯ ಗಮನಕ್ಕೆ ತರಬಹುದಾಗಿದೆ. ಸಾರ್ವಜನಿಕರು ಈ ಅಹವಾಲು ಸಭೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಕೋರಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಲೋಕಾಯುಕ್ತ ಜಿಲ್ಲಾ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರ ಮೊಬೈಲ್ ಸಂಖ್ಯೆ: 93640 62674 ಹಾಗೂ 08482-295445 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News