×
Ad

ಬೀದರ್ | ಮೇ 21ರಂದು ಲೋಕಾಯುಕ್ತ ಅಹವಾಲು ಸಭೆ

Update: 2025-05-19 21:20 IST

ಬೀದರ್ : ಕರ್ನಾಟಕ ಲೋಕಾಯುಕ್ತ ಬೀದರ್‌ ಪೊಲೀಸ್ ಠಾಣೆ ವತಿಯಿಂದ ಭಾಲ್ಕಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಉಪಸ್ಥಿತಿಯಲ್ಲಿ ಮೇ 21 ರಂದು ಬೆಳಿಗ್ಗೆ 11 ಗಂಟೆಗೆ ಸಾರ್ವಜನಿಕ ಕುಂದುಕೊರತೆ, ಅಹವಾಲು ಸ್ವೀಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಲೋಕಾಯುಕ್ತ ಪೊಲೀಸ್ ನಿರೀಕ್ಷಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕರು ತಮ್ಮ ಕುಂದುಕೊರತೆಗಳನ್ನು ನೇರವಾಗಿ ಬಂದು ಸಲ್ಲಿಸಬಹುದು ಅಥವಾ ಸ್ಥಳದಲ್ಲಿಯೇ ಇದ್ದ ಅಧಿಕಾರಿಗಳೊಂದಿಗೆ ಕೆಲಸ ನೆರವೇರಿಸಿಕೊಳ್ಳಬಹುದು. ಇಲ್ಲದಿದ್ದರೆ ಸ್ಥಳದಲ್ಲಿಯೇ ದೂರು ಅರ್ಜಿಯ ಫಾರಂ ನಂ: 1 ಮತ್ತು 2 ತೆಗೆದುಕೊಂಡು ದೂರು ನೀಡಲು ಅನುಕೂಲ ಕಲ್ಪಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News