Bidar | ಸಿಡಿಲು ಬಡಿದು ವ್ಯಕ್ತಿ ಮೃತ್ಯು
ಝರಣೆಪ್ಪ
ಬೀದರ್: ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ಉಡಮನಳ್ಳಿ ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದೆ.
ಮೃತರನ್ನು ಉಡಮನಳ್ಳಿ ಗ್ರಾಮದ ನಿವಾಸಿ ಝರಣೆಪ್ಪ (45) ಎಂದು ಗುರುತಿಸಲಾಗಿದೆ.
ಝರಣೆಪ್ಪ ಅವರು ಕೆಲಸದ ನಿಮಿತ್ತ ಹೊಲಕ್ಕೆ ತೆರಳಿದ್ದರು. ಈ ವೇಳೆ ಮಳೆ ಆರಂಭವಾದ ಹಿನ್ನೆಲೆಯಲ್ಲಿ ಮರದ ಕೆಳಗೆ ಕಟ್ಟಿದ್ದ ಆಕಳನ್ನು ಕರೆತರಲು ಹೋಗಿದ್ದರು. ಮಳೆ ತೀವ್ರವಾಗುತ್ತಿದ್ದರಿಂದ ಮರದ ಕೆಳಗೆ ಆಶ್ರಯ ಪಡೆದು ನಿಂತಿದ್ದ ವೇಳೆ ಏಕಾಏಕಿ ಸಿಡಿಲು ಬಡಿದಿದ್ದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆ ಬೆಮ್ಮಳಖೇಡಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.