ಬೀದರ್ | 89,000ಕ್ಕೂ ಅಧಿಕ ಮೌಲ್ಯದ ಗಾಂಜಾ ಗಿಡ ವಶ : ಆರೋಪಿಯ ಬಂಧನ
Update: 2025-11-10 22:55 IST
ಬೀದರ್ : ಯನಗುಂದಾ ಗ್ರಾಮದಲ್ಲಿ ಮನೆಯ ಜಾಗದಲ್ಲಿ ಗಾಂಜಾ ಗಿಡಗಳು ಬೆಳೆದಿರುವ ಬಗ್ಗೆ ಮಾಹಿತಿ ತಿಳಿದು ಚಿಂತಾಕಿ ಪೊಲೀಸ್ ಠಾಣೆ ಪೊಲೀಸರು ದಾಳಿ ನಡೆಸಿ ಸುಮಾರು 89,200ರೂ. ಮೌಲ್ಯದ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ.
ಚಿಂತಾಕಿ ಪೊಲೀಸ್ ಠಾಣಾ ವ್ಯಾಪ್ತಿಯ ಯನಗುಂದಾ ಗ್ರಾಮದ ವ್ಯಕ್ತಿಯೊಬ್ಬರ ಮನೆಯ ಮುಂದೆ ಗಾಂಜಾ ಬೆಳೆದಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಔರಾದ್ ಸಿಪಿಐ ರಘುವೀರಸಿಂಗ್ ಠಾಕೂರ್ ಅವರ ನೇತೃತ್ವದ ಚಿಂತಾಕಿ ಪೊಲೀಸ್ ಠಾಣೆಯ ಪಿಎಸ್ಐ ಚಂದ್ರಶೇಖರ್ ನೇತೃತ್ವದ ತಂಡ ದಾಳಿ ನಡೆಸಿದೆ.
ದಾಳಿ ವೇಳೆ ಯನಗುಂದಾ ಗ್ರಾಮದ ವ್ಯಕ್ತಿಯೊಬ್ಬರ ಮನೆಯ ಆವರಣದ ಮುಂದೆ ಬೆಳೆದ 89,200ರೂ. ಮೌಲ್ಯದ 892 ಗ್ರಾಂ ತೂಕದ ಮೂರು ಗಾಂಜಾ ಗಿಡಗಳನ್ನು ಪತ್ತೆ ಮಾಡಿ ವಶಕ್ಕೆ ಪಡೆದಿದ್ದಾರೆ. ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಈ ಬಗ್ಗೆ ಚಿಂತಾಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.