ಬೀದರ್ | ಭಾಲ್ಕಿ – ಬಾಜೋಳಗಾ ಗ್ರಾಮದ ಬೆಳೆ ಹಾನಿ ಪ್ರದೇಶ ವೀಕ್ಷಿಸಿದ ಸಚಿವ ಈಶ್ವರ್ ಖಂಡ್ರೆ
Update: 2025-09-23 20:09 IST
ಬೀದರ್: ಭಾಲ್ಕಿ ತಾಲ್ಲೂಕಿನ ಬಾಜೋಳಗಾ ಗ್ರಾಮಕ್ಕೆ ಭೇಟಿ ನೀಡಿ ಮಳೆಯಿಂದ ಉಂಟಾದ ಹಾನಿಯನ್ನು ಪರಿಶೀಲಿಸಿದ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಗ್ರಾಮಸ್ಥರ ಸಂಕಷ್ಟವನ್ನು ಗಮನಿಸಿದರು.
ಧಾರಾಕಾರ ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ಮನೆ ಹಾಗೂ ಮೂಲಭೂತ ಸೌಕರ್ಯಗಳಿಗೆ ಹಾನಿಯಾಗಿದ್ದು, ಜನಸಾಮಾನ್ಯರು ತೊಂದರೆಯಲ್ಲಿದ್ದಾರೆ. ಜನರ ಸಮಸ್ಯೆಗಳನ್ನು ಆಲಿಸಿ ತಕ್ಷಣದ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿತ ಅಧಿಕಾರಿಗಳಿಗೆ ಸಚಿವ ಖಂಡ್ರೆ ಅವರು ಸೂಚನೆ ನೀಡಿದ್ದಾರೆ.
ಸಾರ್ವಜನಿಕರ ಜೀವ, ಆಸ್ತಿ ಮತ್ತು ಮೂಲಭೂತ ಸೌಕರ್ಯಗಳ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದರು.
ಈ ವೇಳೆ ಗ್ರಾಮಸ್ಥರು ಹಾಗೂ ಸ್ಥಳೀಯ ಅಧಿಕಾರಿಗಳು ಉಪಸ್ಥಿತರಿದ್ದರು.