×
Ad

ಬೀದರ್ | ಬ್ರಿಮ್ಸ್ ಆಸ್ಪತ್ರೆಗೆ ಧಿಡೀರ್ ಭೇಟಿ ನೀಡಿದ ಸಚಿವ ಈಶ್ವರ್ ಖಂಡ್ರೆ

Update: 2025-07-18 18:29 IST

ಬೀದರ್ : ಇತ್ತೀಚೆಗೆ ಬ್ರಿಮ್ಸ್ ಆಸ್ಪತ್ರೆಯಲ್ಲಿ ವಿದ್ಯುತ್ ವ್ಯತ್ಯಯದಿಂದ ರೋಗಿಗಳಿಗೆ ತೊಂದರೆ ಉಂಟಾದ ಹಿನ್ನೆಲೆಯಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಇಂದು ಬ್ರಿಮ್ಸ್ ಆಸ್ಪತ್ರೆಗೆ ಧಿಡೀರ್ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು.

ನೇರವಾಗಿ ಆಸ್ಪತ್ರೆಯ ರೋಗಿಗಳೊಂದಿಗೆ ಸಂವಾದ ನಡೆಸಿದ ಸಚಿವರು, ರೋಗಿಗಳಿಗೆ ನೀಡಲಾಗುತ್ತಿರುವ ಚಿಕಿತ್ಸೆ, ಸೌಲಭ್ಯಗಳು ಹಾಗೂ ವೈದ್ಯರು ಹಾಗೂ ಸಿಬ್ಬಂದಿಯಿಂದ ಆಸ್ಪತ್ರೆಯೊಳಗಿನ ಸಮಸ್ಯೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡರು.

ಬ್ರಿಮ್ಸ್ ನಲ್ಲಿ ಸಂಭವಿಸಿದ ವಿದ್ಯುತ್ ವ್ಯತ್ಯಯದ ಕುರಿತು ಅವರು ಗಂಭೀರವಾಗಿ ಗಮನ ಹರಿಸಿದ್ದು, ಈ ಘಟನೆ ನಿರ್ಲಕ್ಷ್ಯದಿಂದ ಉಂಟಾಗಿದ್ದರೆ ಅದನ್ನು ಯಾವುದೇ ಕಾರಣಕ್ಕೂ ಕ್ಷಮಿಸಲಾಗದು. ಈ ಕುರಿತು ತಕ್ಷಣ ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಿದ್ದು, ವರದಿ ಬಂದ ತಕ್ಷಣ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಂದು ಅವರು ಎಚ್ಚರಿಸಿದರು.

ಆಸ್ಪತ್ರೆಯಲ್ಲಿ ಯಾವುದೇ ರೀತಿಯ ಸೌಕರ್ಯದ ಕೊರತೆಯಾಗದಂತೆ ಕ್ರಮ ಕೈಗೊಳ್ಳುತ್ತೇವೆ. ಜನತೆಗೆ ಉತ್ತಮ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪೌರಾಡಳಿತ ಸಚಿವ ರಹೀಮ್ ಖಾನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಹಾಗೂ ಬ್ರಿಮ್ಸ್ ನಿರ್ದೇಶಕ ಶಿವಕುಮಾರ್ ಶೆಟಕಾರ್ ಸೇರಿದಂತೆ ವೈದ್ಯಾಧಿಕಾರಿ ಹಾಗೂ ಇತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News