×
Ad

Bidar | 25ಕ್ಕೂ ಹೆಚ್ಚು ಮಂದಿಗೆ ಕಚ್ಚಿದ ಮಂಗನನ್ನು ಸೆರೆಹಿಡಿದ ಅರಣ್ಯ ಇಲಾಖೆ

Update: 2026-06-02 18:52 IST

ಹುಮನಾಬಾದ್ : ತಾಲೂಕಿನ ಘಾಟಬೋರಳ್ ಗ್ರಾಮದಲ್ಲಿ ಕಳೆದ ಹಲವು ದಿನಗಳಿಂದ ಗ್ರಾಮಸ್ಥರು, ರೈತರು ಹಾಗೂ ಮಕ್ಕಳ ಮೇಲೆ ದಾಳಿ ನಡೆಸಿ ಕಚ್ಚುತ್ತಿದ್ದ ಮಂಗವನ್ನು ಕೊನೆಗೂ ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಗ್ರಾಮದಲ್ಲಿ ಆತಂಕ ಸೃಷ್ಟಿಸಿದ್ದ ಈ ಮಂಗವು ಮಕ್ಕಳು ಸೇರಿದಂತೆ ಸುಮಾರು 25 ಮಂದಿಗೆ ಕಚ್ಚಿ ಗಾಯಗೊಳಿಸಿತ್ತು. ಮಂಗದ ದಾಳಿಯಿಂದ ಗ್ರಾಮಸ್ಥರು ಭಯಭೀತರಾಗಿದ್ದು, ಮನೆಯಿಂದ ಹೊರಬರಲು ಸಹ ಹೆದರುತ್ತಿದ್ದರು.

ಈ ಹಿನ್ನೆಲೆಯಲ್ಲಿ ವಲಯ ಅರಣ್ಯಾಧಿಕಾರಿ ಐಶ್ವರ್ಯ ಗೊಬ್ಬರ್ ಅವರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಸುಮಾರು ಎರಡು ರಿಂದ ಮೂರು ದಿನಗಳ ಕಾಲ ನಿರಂತರ ಕಾರ್ಯಾಚರಣೆ ನಡೆಸಿದ ಬಳಿಕ ಸೋಮವಾರ ರಾತ್ರಿ ಮಂಗವನ್ನು ಸೆರೆ ಹಿಡಿಯಲಾಯಿತು.

ಮಂಗದ ಭೀತಿಯಿಂದ ಆತಂಕದಲ್ಲಿದ್ದ ಗ್ರಾಮಸ್ಥರು ಹಾಗೂ ರೈತರು ಇದೀಗ ನಿಟ್ಟುಸಿರು ಬಿಟ್ಟಿದ್ದು, ಕಾರ್ಯಾಚರಣೆಗೆ ಸಹಕರಿಸಿದ ಎಲ್ಲ ಗ್ರಾಮಸ್ಥರಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಧನ್ಯವಾದ ತಿಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಉಪ ವಲಯ ಅರಣ್ಯಾಧಿಕಾರಿ ರಾಜಶೇಖರ್ ಧೂಪದ್, ಗಸ್ತು ಅರಣ್ಯ ಪಾಲಕರಾದ ಜಗದೇವಪ್ಪ, ಸಂತೋಷ್ ಹಾಗೂ ಸಿಬ್ಬಂದಿಗಳಾದ ಗೋರಖ್, ಬಲಭೀಮ್, ಉಮೇಶ್ ಮತ್ತು ಮಹೇಶ್ ಸೇರಿದಂತೆ ಇತರರು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News