ಬೀದರ್ | ಕೊಲೆ ಪ್ರಕರಣ : ಐವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ
ಬೀದರ್ : ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯವು ಐವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಪ್ರಕಟಿಸಿದೆ.
2021 ರಲ್ಲಿ ವ್ಯಾಪ್ತಿಯ ಲಾಲಬಾಗ್ ಗ್ರಾಮದಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನವಾಡಾ ಪೊಲೀಸ್ ಠಾಣೆಯಲ್ಲಿ ಅಂದಿನ ಪಿಎಸ್ಐ ಶಿವರಾಜ್ ಪಾಟೀಲ್ ಅವರು ಪ್ರಕರಣ ದಾಖಲಿಸಿಕೊಂಡಿದ್ದರು. ಪ್ರಕರಣದ ಮುಂದಿನ ತನಿಖೆಯನ್ನು ಬೀದರ್ ಗ್ರಾಮೀಣ ಪೊಲೀಸ್ ಠಾಣೆಯ ಸಿಪಿಐ ಶ್ರೀಕಾಂತ್ ಅಲ್ಲಾಪೂರೆ ಅವರು ನಡೆಸಿ, ನ್ಯಾಯಾಲಯಕ್ಕೆ ದೊಷರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆಯನ್ನು ಮಾನ್ಯ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದಲ್ಲಿ ಸರಕಾರಿ ಅಭಿಯೋಜಕರಾದ ನಾಗಪ್ಪಾ ಸಿ ನಕಮಾನ್ ಅವರು ಸರಕಾರದ ಪರವಾಗಿ ವಾದ ಮಂಡಿಸಿದ್ದರಿಂದ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ನ್ಯಾ.ವಿಜಯಕುಮಾರ್ ಎಮ್.ಆನಂದಶೆಟ್ಟಿ ಅವರು ಐವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮತ್ತು 25 ಸಾವಿರ ರೂ. ದಂಡ ವಿಧಿಸಿದ್ದಾರೆ.
ಪ್ರಕರಣದ ತನಿಖೆಯನ್ನು ಶಿಸ್ತು ಬದ್ದವಾಗಿ ಮಾಡಿ ನ್ಯಾಯಾಲಯಕ್ಕೆ ದೊಷಾರೋಪಣೆ ಪಟ್ಟಿ ಸಲ್ಲಿಸಿದ ಅಂದಿನ ಬೀದರ್ ಗ್ರಾಮೀಣ ಪೊಲೀಸ್ ಠಾಣೆಯ ಸಿಪಿಐ ಶ್ರೀಕಾಂತ್ ಅಲ್ಲಾಪೂರೆ, ತನಿಖಾ ಸಹಾಯಕ ಸುನಿಲ್ ದಿಮಾಕೆ, ಕೋರ್ಟ್ ಕರ್ತವ್ಯ ನಿರ್ವಹಿಸುತ್ತಿರುವ ಶಿವಕುಮಾರ್ ಪಂಚಭಾಯಿ ಹಾಗೂ ಸರಕಾರದ ಪರವಾಗಿ ವಾದ ಮಂಡಿಸಿದ ಸರಕಾರಿ ಅಭಿಯೋಜಕ ನಾಗಪ್ಪಾ ಸಿ.ನಕಮಾನ ಅವರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.