ಬೀದರ್: ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷದ ಜಿಲ್ಲಾ ಕಾರ್ಯಾಲಯದಲ್ಲಿ ರವಿವಾರ ಪೂರ್ವಭಾವಿ ಸಭೆ ನಡೆಯಿತು.

ಸಭೆಯಲ್ಲಿ ಮುಂಬರುವ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವುದು, ಚುನಾವಣಾ ಕಾರ್ಯತಂತ್ರ ರೂಪಿಸುವುದು ಹಾಗೂ ಚುನಾವಣಾ ಸಂಬಂಧಿತ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಹಮ್ಮಿಕೊಳ್ಳುವ ಕುರಿತು ಚರ್ಚೆ ನಡೆಸಲಾಯಿತು.

ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯ ಪರವಾಗಿ ಸಂಘಟಿತವಾಗಿ ಕಾರ್ಯನಿರ್ವಹಿಸಿ, ಚುನಾವಣಾ ಪ್ರಚಾರ ಮತ್ತು ಸಂಘಟನಾ ಚಟುವಟಿಕೆಗಳನ್ನು ಯಶಸ್ವಿಯಾಗಿ ನಡೆಸುವ ಕುರಿತು ಸಭೆಯಲ್ಲಿ ಸಂಕಲ್ಪ ಕೈಗೊಳ್ಳಲಾಯಿತು.

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣಾ ಪ್ರಚಾರದ ನಿಮಿತ್ತ ಬೀದರ್ ಜಿಲ್ಲೆಗೆ ಆಗಮಿಸಿದ್ದ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಸೇರಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ‘ಮನ್ ಕೀ ಬಾತ್’ ಕಾರ್ಯಕ್ರಮವನ್ನು ಆಲಿಸಿದರು.

ಕಾರ್ಯಕ್ರಮದಲ್ಲಿ ದೇಶದ ಅಭಿವೃದ್ಧಿ, ಜನಸೇವೆ ಹಾಗೂ ರಾಷ್ಟ್ರ ನಿರ್ಮಾಣಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ಪ್ರಧಾನಮಂತ್ರಿಯವರ ಭಾಷಣವನ್ನು ಕಾರ್ಯಕರ್ತರು ಆಲಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ್ ಪಾಟೀಲ್, ಮಾಜಿ ಸಭಾಪತಿ ರಘುನಾಥರಾವ್ ಮಲ್ಕಾಪುರೆ, ಶಾಸಕರಾದ ಶೈಲೇಂದ್ರ ಬೆಲ್ದಾಳೆ ಹಾಗೂ ಡಾ. ಸಿದ್ದು ಪಾಟೀಲ್ ಸೇರಿದಂತೆ ಪಕ್ಷದ ಮುಖಂಡರು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor