ಬೀದರ್ | ಎನ್‌ಎಸ್‌ಎಸ್‌ಕೆ ಅಧ್ಯಕ್ಷ ಡಿ.ಕೆ.ಸಿದ್ರಾಮ್‌ಗೆ ಜಾಮೀನು ಮಂಜೂರು
Update: 2025-05-17 19:21 IST
ಬೀದರ್ : ಡಿಸಿಸಿ ಬ್ಯಾಂಕ್‌ಗೆ ವಂಚನೆ ಮಾಡಿರುವ ಆರೋಪದಲ್ಲಿ ಬಂಧಿತರಾದ ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆ (ಎನ್ ಎಸ್ ಎಸ್ ಕೆ) ಅಧ್ಯಕ್ಷ ಡಿ.ಕೆ.ಸಿದ್ರಾಮ್ ಅವರಿಗೆ ಇಂದು ಜಿಲ್ಲಾ ಸೇಷೆನ್ಸ್ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.
ಜಿಲ್ಲೆಯನ್ನು ಬಿಟ್ಟು ಬೇರೆ ಕಡೆಗೆ ಹೋಗಬಾರದು ಮತ್ತು ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆ ಕಡೆಗೆ ಹೋಗಬಾರದು ಎನ್ನುವ ಷರತ್ತಿನ ಮೇಲೆ ಅವರನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.
ನಗರದ ಡಿಸಿಸಿ ಬ್ಯಾಂಕಿಗೆ ಸುಳ್ಳು ಮಾಹಿತಿ ನೀಡಿ ವಂಚಿಸಿರುವ ಆರೋಪದಡಿ ಅವರ ವಿರುದ್ಧ ಜನವಾಡ ಪೊಲೀಸ್ ಠಾಣೆಯಲ್ಲಿ ಡಿಸಿಸಿ ಬ್ಯಾಂಕಿನ ಅಧಿಕಾರಿ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ ಸಿದ್ರಾಮ್ ಅವರನ್ನು ಬಂಧಿಸಲಾಗಿತ್ತು.