ಬೀದರ್: ಕಾವ್ಯ ರಚನೆಯಲ್ಲಿ ಆಸಕ್ತಿ ಹೊಂದಿರುವವರಿಗಾಗಿ ಜನಪರ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಜಿಲ್ಲಾ ಮಟ್ಟದ ಒಂದು ದಿನದ ಕಾವ್ಯ ಕಮ್ಮಟವನ್ನು ಅ.4ರಂದು ಭಾನುವಾರ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ನಗರದ ಕುಂಬಾರವಾಡ ರಸ್ತೆಯಲ್ಲಿರುವ ಅತಿವಾಳೆ ಸಾಂಸ್ಕೃತಿಕ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಆಯೋಜಕ ಡಾ.ಸಂಜೀವಕುಮಾರ್ ಅತಿವಾಳೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾವ್ಯ ಬರೆಯುವ ಆಸಕ್ತಿ ಹಾಗೂ ಸಾಹಿತ್ಯದ ಅಭಿರುಚಿ ಹೊಂದಿರುವವರು ಕಮ್ಮಟದಲ್ಲಿ ಭಾಗವಹಿಸಬಹುದು. ಕಾವ್ಯ ರಚನೆಯ ವಿವಿಧ ಆಯಾಮಗಳು, ಕವಿತೆಯ ಅಭಿವ್ಯಕ್ತಿ, ಭಾಷಾ ಬಳಕೆ ಹಾಗೂ ಸೃಜನಶೀಲ ಬರವಣಿಗೆಯ ಕುರಿತು ಮಾರ್ಗದರ್ಶನ ನೀಡಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

‘ಕವಿತೆ ಮನದ ಮಾತು’ ಎಂಬ ಆಶಯದೊಂದಿಗೆ ನಡೆಯಲಿರುವ ಕಮ್ಮಟದಲ್ಲಿ ಜಿಲ್ಲೆಯ ಕಾವ್ಯಾಭಿಮಾನಿಗಳು ಹಾಗೂ ಉದಯೋನ್ಮುಖ ಕವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅವರು ಮನವಿ ಮಾಡಿದ್ದಾರೆ.

ಕಮ್ಮಟದಲ್ಲಿ ಭಾಗವಹಿಸಲು ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಮೊ: 99860 33356ಕ್ಕೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor