×
Ad

ಬೀದರ್ | ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ, ಜೋಳ ಖರೀದಿ ಕೇಂದ್ರ ಆರಂಭ : ಡಿಸಿ ಶಿಲ್ಪಾ ಶರ್ಮಾ

Update: 2025-10-08 20:50 IST

ಸಾಂದರ್ಭಿಕ ಚಿತ್ರ

ಬೀದರ್ : ಕರ್ನಾಟಕ ಸರ್ಕಾರದ ಆದೇಶದಂತೆ 2025-26ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತವು ಸಾಮಾನ್ಯ ಪ್ರತಿ ಕ್ವಿಂಟಲ್‌ಗೆ 2,369 ರೂ. ಹಾಗೂ ಭತ್ತ-ಗ್ರೇಡ್ ಎ ಪ್ರತಿ ಕ್ವಿಂಟಲ್‌ಗೆ 2,389 ರೂ. ರಂತೆ ಖರೀದಿಸಲು ಹಾಗೂ ಬಿಳಿಜೋಳ-ಹೈಬ್ರಿಡ್ ಪ್ರತಿ ಕ್ವಿಂಟಲ್‌ಗೆ 3,699 ರೂ. ಮತ್ತು ಬಿಳಿಜೋಳ-ಮಾಲ್ದಂಡಿ ಪ್ರತಿ ಕ್ವಿಂಟಲ್‌ಗೆ 3,745 ರೂ. ರಂತೆ ತಾಲೂಕುವಾರು ನೋಂದಣಿ ಮತ್ತು ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಖರೀದಿ ಕೇಂದ್ರಗಳ ವಿವರ :

ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಸಗಟು ಮಳಿಗೆ ಎಪಿಎಂಸಿ ಯಾರ್ಡ್ ಔರಾದ್ (ಬಿ) (95357 95880), ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಸಗಟು ಮಳಿಗೆ ಇಂಡಸ್ಟ್ರಿಯಲ್ ಏರಿಯಾ ಬಸವಕಲ್ಯಾಣ (88845 63795), ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಸಗಟು ಮಳಿಗೆ ಎಪಿಎಂಸಿ ಯಾರ್ಡ್ ಭಾಲ್ಕಿ (94828 72583), ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಮೈಲೂರು ಬೀದರ್ (94828 72583), ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಸಗಟು ಮಳಿಗೆ ಆರ್‌ಟಿಓ ಚೆಕ್ ಪೊಸ್ಟ್ ಹತ್ತಿರ ಹುಮನಾಬಾದ್ (97434 30353).

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿಗೆ ಸಂಬಂಧಿಸಿದಂತೆ ಸೆ.15 ರಿಂದ ಅ.31ರ ವರೆಗೆ ಖರೀದಿಗೆ ಸಂಬಂಧಿಸಿದಂತೆ ರೈತರ ನೋಂದಣಿ ಕಾರ್ಯವನ್ನು ಪ್ರಾರಂಭಿಸಲಾಗುವುದು. ಹಾಗೆಯೇ ನ.1 ರಿಂದ ಫೇ.28, 2026 ರ ಅವಧಿಯವರೆಗೆ ಭತ್ತ ಖರೀದಿ ಕಾರ್ಯವನ್ನು ಕೈಗೊಳ್ಳಲಾಗುವುದು ಅವರು ಹೇಳಿದ್ದಾರೆ.

ಜೋಳ ಖರೀದಿಗೆ ಸಂಬಂಧಿಸಿದಂತೆ ಡಿ.1, 2025 ರಿಂದ ಮಾ.31, 2026ರ ವರೆಗೆ ಖರೀದಿಗೆ ಸಂಬಂಧಿಸಿದಂತೆ ರೈತರ ನೋಂದಣಿ ಕಾರ್ಯವನ್ನು ಪ್ರಾರಂಭಿಸಲಾಗುವುದು. ಹಾಗೆಯೇ ಜ.1, 2026ರಿಂದ ಮಾ.31, 2026ರ ಅವಧಿಯವರೆಗೆ ಜೋಳ ಖರೀದಿ ಕಾರ್ಯವನ್ನು ಕೈಗೊಳ್ಳಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

ಆದ ಕಾರಣ ರೈತರು ಕೃಷಿ ಇಲಾಖೆಯವರು ಸಿದ್ದಪಡಿಸಿದ ಫ್ರೂಟ್ಸ್ ಎಂಬ ತಂತ್ರಾಂಶದಲ್ಲಿ ನಮೂದಿಸಿರುವ ಬೆಳೆಯ ಆಧಾರದ ಮೇಲೆ ರೈತರ ಹೆಸರನ್ನು ನೊಂದಾಯಿಸಿಕೊಳ್ಳಲಾಗುವುದು. ಒಂದು ವೇಳೆ ಫ್ರೂಟ್ಸ್ ತಂತ್ರಾಂಶದಲ್ಲಿ ತೊಂದರೆಯಿದ್ದಲ್ಲಿ ಹತ್ತಿರವಿರುವ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ತಂತ್ರಾಂಶದಲ್ಲಿ ಸರಿಪಡಿಸಿಕೊಂಡು ನೋಂದಣಿ ಮಾಡಿಕೊಳ್ಳಲು ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News