ಬೀದರ್ | ಕಮಲನಗರದಲ್ಲಿ ಜಿಲ್ಲಾಧಿಕಾರಿ ಸಮ್ಮುಖದಲ್ಲಿ ಶಾಂತಿ ಸಭೆ
Update: 2025-06-16 20:56 IST
ಬೀದರ್ : ಕಮಲನಗರದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರ ಸಮ್ಮುಖದಲ್ಲಿ ಶಾಂತಿ ಸಭೆ ಜರುಗಿತು.
ಶಾಂತಿ ಸಭೆಯಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಮಾತನಾಡಿ, ಯಾರೂ ಕಾನೂನು ಕೈಗೆತ್ತಿಕೊಳ್ಳದೇ ಎಲ್ಲರೂ ಸೌಹಾರ್ದತೆಯಿಂದ ಬದುಕಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಸೇರಿದಂತೆ ಮುಸ್ಲಿಂ ಮುಖಂಡರು ಉಪಸ್ಥಿತರಿದ್ದರು.