×
Ad

ಬೀದರ್ | ಪೋಕ್ಸೊ ಪ್ರಕರಣ : ಆರೋಪಿಗೆ 20 ವರ್ಷ ಜೈಲು, ದಂಡ

Update: 2025-07-11 19:08 IST

ಬೀದರ್ : ಪೊಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಮತ್ತು 5 ಸಾವಿರ ರೂ. ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಆದೇಶಿಸಿದೆ.

ಭಾಲ್ಕಿ ತಾಲ್ಲೂಕಿನ ಮೇಹಕರ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಅಳವಾಯಿ ಗ್ರಾಮದಲ್ಲಿ 2024 ರಲ್ಲಿ ಪೊಕ್ಸೋ ಪ್ರಕರಣಕ್ಕೆ ಒಳಪಡುವ ಘಟನೆ ನಡೆದಿತ್ತು. ಈ ಘಟನೆ ವಿರುದ್ಧ ಮೇಹಕರ್ ಪೊಲೀಸ್ ಠಾಣೆಯಲ್ಲಿ ಅಂದಿನ ಎಎಸ್ಐ ಚಂದ್ರಕಾಂತ್ ಅವರು ಪೊಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದರು. ಮುಂದಿನ ತನಿಖೆಯನ್ನು ಭಾಲ್ಕಿ ಗ್ರಾಮೀಣ ಪೊಲೀಸ್ ವೃತ ನಿರೀಕ್ಷಕ ಜಿ.ಎಸ್ ಬಿರಾದಾರ್ ಅವರು ವಹಿಸಿಕೊಂಡು ಪ್ರಕರಣದ ತನಿಖೆಯನ್ನು ಅಚ್ಚುಕಟ್ಟಾಗಿ ನಡೆಸಿ, ನ್ಯಾಯಾಲಯಕ್ಕೆ ದೊಷರೋಪಣಾ ಪಟ್ಟಿ ಸಲ್ಲಿಸಿದ್ದರು.

ಈ ಪ್ರಕರಣದ ಕುರಿತು ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಧಿಷರಾದ ಬಿ.ಕೆ ಕೋಮಲಾ ಅವರು ಅಪರಾಧಿಯನ್ನು ಶಿಕ್ಷೆಗೆ ಒಳಪಡಿಸಿ ಆದೇಶಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News