ಬೀದರ್ | ಮಾ.4 ರಂದು ಪುರಸಭೆ ಬಜೆಟ್ ಮಂಡನೆಯ ಪೂರ್ವಭಾವಿ ಸಭೆ
Update: 2025-02-25 16:33 IST
ಬೀದರ್ : 2025-26ನೇ ಸಾಲಿನ ವಾರ್ಷಿಕ ಬಜೆಟ್ ಮಂಡನೆ ಸಂಬಂಧವಾಗಿ ಮಾ.4 ರಂದು ಹಳ್ಳಿಖೇಡ (ಬಿ) ನಗರದ ಪುರಸಭೆ ಸಭಾಂಗಣದಲ್ಲಿ ಮೊದಲನೆ ಸುತ್ತಿನ ಸಾರ್ವಜನಿಕರ ಪೂರ್ವಭಾವಿ ಸಭೆ ಜರುಗಲಿದೆ ಎಂದು ಪುರಸಭೆಯ ಮುಖ್ಯಾಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಂದು ಮಧ್ಯಾಹ್ನ 3:30 ಗಂಟೆಗೆ ಪೂರ್ವಭಾವಿ ಸಭೆ ಜರುಗಲಿದೆ. ಈ ಸಭೆಯಲ್ಲಿ ಪಟ್ಟಣದ ನೊಂದಾಯಿತ ವಸತಿ ಕ್ಷೇಮಾಭಿವೃದ್ಧಿ ಸಂಘ, ನೊಂದಾಯಿತ ಸರ್ಕಾರೇತರ ಸಂಘ ಸಂಸ್ಥೆ, ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಹಾಗೂ ಇತರೆ ಸಂಘ ಸಂಸ್ಥೆಯ ಪ್ರತಿನಿಧಿಗಳು, ಪಟ್ಟಣದ ಗಣ್ಯರು ಹಾಗೂ ಸಾರ್ವಜನಿಕರು ಭಾಗವಹಿಸಿ ಬಜೆಟ್ ವಿಷಯಕ್ಕೆ ಸಂಬಂಧಪಟ್ಟಂತೆ ತಮ್ಮ ಸಲಹೆ ಸೂಚನೆ ನೀಡಬಹುದಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.