ಬೀದರ್ | ಸೆ. 21 ರಂದು ‘ಮನೆ ಮನೆಗೆ ಅಂಬೇಡ್ಕರ್’ ಅಭಿಯಾನದ ಪೂರ್ವಭಾವಿ ಸಭೆ
Update: 2025-09-19 18:27 IST
ಬೀದರ್: ಸಂವಿಧಾನದ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಸಂದೇಶವನ್ನು ಪ್ರತಿಯೊಬ್ಬ ಅನುಯಾಯಿ ಮತ್ತು ಅಭಿಮಾನಿಗೆ ತಲುಪಿಸುವ ಉದ್ದೇಶದಿಂದ ಬೀದರ್ ಜಿಲ್ಲೆಯಲ್ಲಿ ‘ಮನೆ ಮನೆಗೆ ಅಂಬೇಡ್ಕರ್’ ಅಭಿಯಾನ ಕೈಗೆತ್ತಿಕೊಳ್ಳಲಾಗಿದೆ ಎಂದು ಅಭಿಯಾನದ ಮುಖ್ಯಸ್ಥ ಮಹೇಶ್ ಗೋರನಾಳಕರ್ ತಿಳಿಸಿದ್ದಾರೆ.
ಸೆಪ್ಟೆಂಬರ್ 21 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಪ್ರವಾಸಿ ಮಂದಿರದಲ್ಲಿ ಈ ಅಭಿಯಾನದ ಪೂರ್ವಭಾವಿ ಸಭೆ ನಡೆಯಲಿದೆ. ಡಾ. ಅಂಬೇಡ್ಕರ್ ಅವರು ಧಾರ್ಮಿಕ, ರಾಜಕೀಯ, ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ಸಾಂಸ್ಕೃತಿಕ ಮತ್ತು ವೈಜ್ಞಾನಿಕವಾಗಿ ನೀಡಿದ ಮಾರ್ಗದರ್ಶನವನ್ನು ಜನತೆಗೆ ತಲುಪಿಸುವ ಮೂಲಕ ಸ್ವಾಭಿಮಾನಿ ಬದುಕು ರೂಪಿಸುವುದು ಅಭಿಯಾನದ ಮುಖ್ಯ ಗುರಿಯಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸಭೆಯಲ್ಲಿ ಡಾ. ಅಂಬೇಡ್ಕರ್ ಅವರ ಅನುಯಾಯಿಗಳು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಲಹೆ, ಸೂಚನೆ ನೀಡುವ ಮೂಲಕ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಅವರು ಕೋರಿದ್ದಾರೆ.