×
Ad

ಬೀದರ್ | ಯುವ ಕಾಂಗ್ರೆಸ್‌ನ ಸಾಮಾಜಿಕ ಮಾಧ್ಯಮ ವಿಭಾಗದ ರಾಜ್ಯ ಸಂಯೋಜಕರಾಗಿ ಪ್ರಥ್ವಿರಾಜ ನೇಮಕ

Update: 2026-01-02 19:56 IST

ಬೀದರ್ : ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌ನ ಸಾಮಾಜಿಕ, ಮಾಧ್ಯಮ ವಿಭಾಗದ ರಾಜ್ಯ ಸಂಯೋಜಕರಾಗಿ ಔರಾದ್‌ ತಾಲೂಕಿನ ತುಳಜಾಪೂರ್ ಗ್ರಾಮದ ಪ್ರಥ್ವಿರಾಜ ಮುಧೋಳಕರ ಅವರನ್ನು ನೇಮಕ ಮಾಡಲಾಗಿದೆ.

ಯುವ ಕಾಂಗ್ರೆಸ್‌ನ ಕರ್ನಾಟಕ ಉಸ್ತುವಾರಿಗಳಾದ ನಿಗಮ್ ಭಂಡಾರಿ, ರಾಜ್ಯಾಧ್ಯಕ್ಷರ ಮಂಜುನಾಥ್ ಗೌಡ, ರಾಷ್ಟ್ರೀಯ ಸಂಯೋಜಕಿ ಹಾಗೂ ಸಾಮಾಜಿಕ ಮಾಧ್ಯಮ ವಿಭಾಗದ ಉಸ್ತುವಾರಿ ಶ್ವೇತಾ ಸೋನಿ ಮತ್ತು ಸಾಮಾಜಿಕ ಮಾಧ್ಯಮ ವಿಭಾಗದ ರಾಜ್ಯಾಧ್ಯಕ್ಷ ಸಿದ್ದು ಹಳೇಗೌಡ ಅವರ ನೇತೃತ್ವದಲ್ಲಿ ಈ ನೇಮಕಾತಿ ನಡೆದಿದೆ. 

ಕಾಂಗ್ರೆಸ್ ಪಕ್ಷದಲ್ಲಿ ನನ್ನ ಕೆಲಸವನ್ನು ಗುರುತಿಸಿ ರಾಜ್ಯ ಮಟ್ಟದ ಜವಾಬ್ದಾರಿ ನೀಡಿರುವುದು ಸಂತಸ ತಂದಿದೆ ಎಂದು ಪ್ರಥ್ವಿರಾಜ ಮುಧೋಳಕರ ಸಂತಸ ವ್ಯಕ್ತಪಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News