Bidar | ಮಾಂಜಾ ದಾರದಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರಕ್ಕೆ ಆಗ್ರಹಿಸಿ ಧರಣಿ

Update: 2026-08-14 20:10 IST

ಬೀದರ್: ಮಾಂಜಾ ದಾರದಿಂದ ಮೃತಪಟ್ಟ ಸಂಜುಕುಮಾರ್ ಅವರ ಕುಟುಂಬಕ್ಕೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ಮುಖಂಡರು ಹಾಗೂ ಮೃತರ ಕುಟುಂಬಸ್ಥರು ನಗರದ ಜಿಲ್ಲಾ ಉಸ್ತುವಾರಿ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸಿದರು.

ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ-65ರಲ್ಲಿ ಜ.14, 2026ರಂದು ಸಂಜುಕುಮಾರ್ ಸಂಚರಿಸುತ್ತಿದ್ದ ವೇಳೆ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದರು. ಘಟನೆ ಬಳಿಕ ಮೃತರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ಒದಗಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದ್ದರು ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.

ಘಟನೆ ನಡೆದು ಎಂಟು ತಿಂಗಳು ಕಳೆದರೂ ಇದುವರೆಗೆ ಯಾವುದೇ ಪರಿಹಾರ ದೊರೆತಿಲ್ಲ ಎಂದು ಆರೋಪಿಸಿದ ಪ್ರತಿಭಟನಾಕಾರರು, ಸಚಿವರ ಭರವಸೆ ಈಡೇರದೆ ಉಳಿದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮೃತ ಸಂಜುಕುಮಾರ್ ಅವರ ಕುಟುಂಬದ ಆರ್ಥಿಕ ಪರಿಸ್ಥಿತಿಯನ್ನು ಪರಿಗಣಿಸಿ ಸರ್ಕಾರ ಕೂಡಲೇ ಶಾಶ್ವತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಧರಣಿ ನಡೆಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News