ಬೀದರ್ | ಜನರಿಗೆ ಶುದ್ಧ ಕುಡಿಯುವ ನೀರು ಕಲ್ಪಿಸಿ : ಮಾಣಿಕರಾವ್ ಪಾಟೀಲ್
Update: 2026-01-30 22:44 IST
ಬೀದರ್, ಜ.30: ಕೆಟ್ಟು ನಿಂತ ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿಗೆ ಕ್ರಮವಹಿಸಿ ಜನರಿಗೆ ಅನುಕೂಲ ಕಲ್ಪಿಸಬೇಕು ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮಾಣಿಕರಾವ್ ಪಾಟೀಲ್ ಹೇಳಿದ್ದಾರೆ.
ನಗರದ ತಾಪಂ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಗ್ರಾಮಗಳಲ್ಲಿ ಸಾರ್ವಜನಿಕರ ಮೇಲಿನ ನಾಯಿಗಳ ದಾಳಿಯನ್ನು ತಡೆಯಬೇಕು. ಸಾರ್ವಜನಿಕ ಶೌಚಾಲಯಗಳು ಮುಕ್ತ ಉಪಯೋಗಕ್ಕೆ ಅನುವುಮಾಡಿಕೊಡಬೇಕು. ಕರ ವಸೂಲಾತಿಗೆ ಹೆಚ್ಚು ಒತ್ತು ನೀಡಬೇಕು ಎಂದರು. ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕ ಸಂಜುಕುಮಾರ್ ಹಾಗೂ ಸುದೇಶ್ ಕೊಡೆ, ಅಧಿಕಾರಿಗಳು ಉಪಸ್ಥಿತರಿದ್ದರು.