ಬೀದರ್ | ಜು.29 ರಂದು ತ್ರೈಮಾಸಿಕ ಕೆಡಿಪಿ ಸಭೆ
Update: 2025-07-20 17:09 IST
ಡಾ.ಗಿರೀಶ್ ಬದೋಲೆ
ಬೀದರ್ : ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ (ಕೆಡಿಪಿ) ಪ್ರಗತಿ ಪರಿಶೀಲನಾ ಸಭೆಯು ಜು.29 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರ ಅಧ್ಯಕ್ಷತೆಯಲ್ಲಿ ಈ ಸಭೆ ನಡೆಯಲಿದೆ. ಇದರಿಂದಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ತಮ್ಮ ಇಲಾಖೆಯ ಪ್ರಗತಿ ವರದಿ ಮತ್ತು ಅನುಪಾಲನಾ ವರದಿಯೊಂದಿಗೆ ತಪ್ಪದೇ ಸಭೆಗೆ ಹಾಜರಾಗಬೇಕು ಎಂದು ಅವರು ತಿಳಿಸಿದ್ದಾರೆ.