×
Ad

Bidar | ಎಸ್‌ಐಆರ್ ಜಾಗೃತಿಗಾಗಿ ವಿದ್ಯಾರ್ಥಿಗಳಿಂದ ರ‍್ಯಾಲಿ

Update: 2026-07-02 19:48 IST

ಬೀದರ್ : ಮತದಾರರ ಪಟ್ಟಿಯ ಸಮಗ್ರ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಕುರಿತು ಜನಜಾಗೃತಿಗಾಗಿ ನಗರದ ಹತ್ತಾರು ಪಿಯು ಕಾಲೇಜುಗಳ ವಿದ್ಯಾರ್ಥಿಗಳು ಗುರುವಾರ ರ‍್ಯಾಲಿ ನಡೆಸಿದರು.

ಜಿಲ್ಲಾಡಳಿತ ಮತ್ತು ಸ್ವೀಪ್ ಸಮಿತಿಯಿಂದ ಆಯೋಜನೆ ಮಾಡಲಾದ ಎಸ್‌ಐಆರ್ ಕುರಿತು ಜನಜಾಗೃತಿಗಾಗಿ ರ‍್ಯಾಲಿಯನ್ನು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ ಅವರು ಹಸಿರು ನಿಶಾನೆ ತೋರುವ ಮೂಲಕ ಉದ್ಘಾಟನೆ ಮಾಡಿದರು.

ವಿದ್ಯಾರ್ಥಿಗಳು ಬೆಳಿಗ್ಗೆ 10 ಗಂಟೆಗೆ ತಮ್ಮ ತಮ್ಮ ಕಾಲೇಜುಗಳಿಂದಲೇ ಜನಜಾಗೃತಿ ರ‍್ಯಾಲಿ ಆರಂಭಿಸಿ, ಅಂಬೇಡ್ಕರ್ ವೃತ್ತದ ಮೂಲಕ ಬೆಳಿಗ್ಗೆ 11 ಗಂಟೆಗೆ ನಗರದ ನೆಹರು ಕ್ರೀಡಾಂಗಣದಲ್ಲಿ ಸಮಾವೇಶಗೊಂಡರು. ರ‍್ಯಾಲಿಯುದ್ಧಕ್ಕೂ ಪ್ರಜಾಪ್ರಭುತ್ವಕ್ಕೆ ಜಯವಾಗಲಿ ಎನ್ನುವ ಘೋಷಣೆಗಳು ಮುಳುಗಿದವು.

ಈ ಸಂದರ್ಭದಲ್ಲಿ ಶಾಹೀನ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಅಬ್ದುಲ್ ಖದೀರ್ ಹಾಗೂ ವಿಸ್ಡ್ಂ ಕಾಲೇಜಿನ ಅಧ್ಯಕ್ಷ ಮುಹಮ್ಮದ್ ಆಶೀಫೋದ್ದೀನ್ ಸೇರಿದಂತೆ ಜಿಲ್ಲಾ ಪಂಚಾಯತ್ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು, ನೂರಾರು ವಿದ್ಯಾರ್ಥಿಗಳು ಭಾಗಿಯಾಗಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News