×
Ad

ಬೀದರ್ | ಬಾಲಕಿ ಮೇಲೆ ಅತ್ಯಾಚಾರ ನಡೆದಿಲ್ಲ : ಎಸ್ಪಿ ಪ್ರದೀಪ್ ಗುಂಟಿ ಸ್ಪಷ್ಟನೆ

Update: 2025-07-26 20:39 IST

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ

ಬೀದರ್ : ಜು. 24 ರಂದು ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೊಕ್ಸೋ ಕಾಯ್ದೆಯಡಿ ಪ್ರಕರಣವೊಂದು ದಾಖಲಾಗಿ, ಸುದ್ದಿಯಾಗಿತ್ತು. ಆದರೆ ಪ್ರಕರಣದ ತನಿಖೆಯಲ್ಲಿ ಮಗುವಿಗೆ ನಗರದ ಬ್ರಿಮ್ಸ್ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಸಿದ್ದು, ವೈದ್ಯಕೀಯ ಪರೀಕ್ಷೆಯಲ್ಲಿ ದೌರ್ಜನ್ಯದ ಬಗ್ಗೆ ಯಾವುದೇ ರೀತಿಯ ಪುರಾವೆ ಕಂಡು ಬಂದಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ವೈದ್ಯಾಧಿಕಾರಿಗಳು ಕುಲಂಕುಶವಾಗಿ ವೈದ್ಯಕೀಯ ತಪಾಸಣೆ ನಡೆಸಿದ್ದಾರೆ. ಆದರೆ ಮಗುವಿನ ಮೇಲೆ ಯಾವುದೇ ದೌರ್ಜನ್ಯ ನಡೆದ ಬಗ್ಗೆ ಯಾವುದೇ ಪುರಾವೆಗಳು ಕಂಡುಬಂದಿಲ್ಲ. ಮಗುವಿಗೆ ಆದ ಗಾಯಗಳು ಆಕಸ್ಮಿಕವಾಗಿ ಯಾವುದೊ ವಸ್ತು ಚುಚ್ಚಿದ್ದರಿಂದ ಕೇವಲ ಮೇಲ್ಭಾದಲ್ಲಿ ಗಾಯವಾಗಿದೆ ಎಂದು ಪ್ರಾಥಮಿಕ ಅಭಿಪ್ರಾಯ ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಮಗುವಿಗೆ ಮತ್ತು ಮಗುವಿನ ಪಾಲಕರಿಗೆ ಮಕ್ಕಳ ರಕ್ಷಣಾ ಘಟಕದಲ್ಲಿ (ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ) ಆಪ್ತ ಸಮಾಲೋಚನೆ ಮಾಡಿದ್ದು, ಈ ಸಮಯದಲ್ಲಿ ಮಗುವಿನ ಮೇಲೆ ಯಾವುದೆ ಲೈಂಗಿಕ ದೌರ್ಜನ್ಯ ನಡೆದ ಕುರುಹುಗಳು ಕಂಡುಬಂದಿಲ್ಲ. ತನಿಖೆಯ ಎಲ್ಲಾ ಹಂತವನ್ನು ಮಗುವಿನ ಪೋಷಕರಿಗೆ ಕಡ್ಡಾಯವಾಗಿ ತಿಳಿಸಲಾಗುತ್ತಿದೆ. ಇನ್ನು ಎಲ್ಲಾ ಆಯಾಮಗಳಿಂದ ತನಿಖೆ ಮುಂದುವರೆದಿದೆ. ಪ್ರಕರಣದ ಸೂಕ್ಷ್ಮತೆ ಮತ್ತು ಮಗುವಿನ ಭವಿಷ್ಯದ ದೃಷ್ಟಿಯಿಂದ ಸಾರ್ವಜನಿಕರು ಮತ್ತು ಪತ್ರಕರ್ತರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಅವರು ಮನವಿ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News