×
Ad

ಬೀದರ್ | 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ : ಪ್ರಕರಣ ದಾಖಲು

Update: 2025-07-24 19:38 IST

ಸಾಂದರ್ಭಿಕ ಚಿತ್ರ | PC : freepik.com

ಬೀದರ್ : ಜಿಲ್ಲೆಯ ಗ್ರಾಮವೊಂದರಲ್ಲಿ ನಾಲ್ಕು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ.

ನನ್ನ ಮಗಳು ನಗರದ ಶಾಲೆಯೊಂದರಲ್ಲಿ ನರ್ಸರಿಯಲ್ಲಿ ಕಲಿಯುತ್ತಿದ್ದು, ಬುಧವಾರ ಶಾಲೆಗೆ ತೆರಳಿದ್ದ ಮಗಳು ವಾಪಾಸ್ಸು ಮನೆಗ ಬಂದಾಗ ಆಕೆಯ ಶಾಲಾ ಸಮವಸ್ತ್ರ ತೆಗೆಯುತ್ತಿದ್ದಾಗ ರಕ್ತದ ಕಲೆ ಕಂಡು ಬಂದಿದೆ. ಬಾಲಕಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾರೋ ಅಪರಿಚಿತರು ಶಾಲೆಯಲ್ಲಿ ನನ್ನ ಮಗಳ ಮೇಲೆ ಅತ್ಯಾಚಾರ ಎಸಗಿದ್ದು, ಇವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಾಲಕಿಯ ತಾಯಿ ದೂರಿನಲ್ಲಿ ತಿಳಿಸಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಈ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News