×
Ad

Bidar | 8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ : ಆರೋಪಿ ಬಂಧನ

Update: 2026-05-14 22:12 IST

ಬೀದರ್ : ಜಿಲ್ಲೆಯ ಗ್ರಾಮವೊಂದರಲ್ಲಿ 8 ವರ್ಷದ ಬಾಲಕಿಯ ಮೇಲೆ 35 ವರ್ಷದ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ ಘಟನೆ ಮೇ 7ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಬಾಲಕಿಯ ತಂದೆ ಕೆಲಸಕ್ಕೆ ಹೋಗಿದ್ದ ವೇಳೆ, ಮನೆಯಲ್ಲಿದ್ದ ಬಾಲಕಿಯನ್ನು ಪಕ್ಕದ ಮನೆಯ ವ್ಯಕ್ತಿಯೇ ತನ್ನ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ.

ಅತ್ಯಾಚಾರಕ್ಕೊಳಗಾದ ಬಾಲಕಿಗೆ ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಈ ಕುರಿತು ಸಂತ್ರಸ್ತ ಬಾಲಕಿಯ ತಂದೆ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪೋಕ್ಸೋ ಕಾಯ್ದೆಯಡಿ ಆರೋಪಿಯನ್ನು ಬಂಧಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News