ಬೀದರ್ | ವಿಶ್ವ ಕೌಶಲ್ಯ ಸ್ಪರ್ಧೆಗೆ ಹೆಸರು ನೋಂದಣಿಗೆ ಅವಕಾಶ : ಡಿಸಿ ಶಿಲ್ಪಾ ಶರ್ಮಾ
ಬೀದರ್ : 2026ನೇ ಸಾಲಿನ ವಲ್ಡ್ ಸ್ಕಿಲ್ಸ್ ಸ್ಪರ್ಧೆಯು ಚೀನ ದೇಶದ ಶಾಂಘೈ ನಗರದಲ್ಲಿ ನಡೆಯಲಿದ್ದು, ಇದರ ಪೂರ್ವ ಸಿದ್ಧತೆಯ ಭಾಗವಾಗಿ ಬೆಂಗಳೂರಿನ ಕರ್ನಾಟಕ ಕೌಶಲ್ಯ ಅಭಿವೃಧಿ ನಿಗಮ (ಕೆ.ಎಸ್.ಡಿ.ಸಿ) ಅವರು ಕರ್ನಾಟಕ ರಾಜ್ಯ ಕೌಶಲ್ಯ ಒಲಿಂಪಿಕ್ಸ್ (IndiaSkills-Karnataka-2025) ಸ್ಪರ್ದಾ ಕಾರ್ಯಕ್ರಮವನ್ನು ಜಿಲ್ಲಾ, ವಲಯ ಹಾಗೂ ರಾಜ್ಯ ಮಟ್ಟಗಳಲ್ಲಿ ಕೈಗೊಳ್ಳಲು ಯೋಜಿಸಲಾಗಿದ್ದು, ಆಸಕ್ತರು ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಈ ಸ್ಪರ್ಧೇಯ ವಿಜೇತರು ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತ ದೇಶವನ್ನು ಪ್ರತಿನಿಧಿಸಲು ಮುಂದುವರೆದ ತರಬೇತಿಯ ಆಯ್ಕೆಗೆ ಒಳಗಾಗುತ್ತಾರೆ. ಅದರಂತೆ ಜಿಲ್ಲೆಯ 16 ರಿಂದ 25 ವರ್ಷ ವಯಸ್ಸಿನ ಯುವಕ ಯುವತಿಯರು, ಒಟ್ಟು 63 ವಿವಿಧ ಬಗೆಯ ಕೌಶಲ್ಯ ಸ್ಪರ್ಧೇಯಲ್ಲಿ ಭಾಗವಹಿಸಬಹುದು.
ಸ್ಪರ್ಧೇಯಲ್ಲಿ ಭಾಗವಹಿಸುವ ಅಭ್ಯರ್ಥಿಗಳು https://www.skillindiadigital.gov.in/home ನಲ್ಲಿ ಸೆ.30ರ ಒಳಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಹೆಸರು ನೋಂದಣಿ ಮಾಡಿಕೊಂಡು ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಭಾಗವಹಿಸಬೇಕು ಎಂದು ಹೇಳಿದ್ದಾರೆ.
ಇಂಡಿಯಾ ಸ್ಕಿಲ್ 2025ರ ಸ್ಪರ್ದೆಯ ಕುರಿತಾದ ಸಂಪೂರ್ಣ ಮಾಹಿತಿಗಾಗಿ www.skillindiadigital.gov.in ಗೆ ಲಾಗಿನ್ ಮಾಡಿ ಅಗತ್ಯ ಮಾಹಿತಿ ಪಡೆದುಕೊಳ್ಳಬಹುದು. ಹಾಗೆಯೇ ಹೆಚ್ಚಿನ ಮಾಹಿತಿಗಾಗಿ 91 96064 92216 ನಂಬರಿಗೆ ಕರೆ ಮಾಡಬಹುದು ಎಂದು ಅವರು ತಿಳಿಸಿದ್ದಾರೆ.